ಶೀಘ್ರವೇ ವಿದ್ಯಾರ್ಥಿ ವೇತನ ಮಂಜೂರು ಮಾಡಿ: ದೆಹಲಿ ಐ.ಐ.ಟಿ ಅಧಿಕಾರಿಗಳಿಗೆ ಕ್ಯಾಂಪಸ್ ಫ್ರಂಟ್ ಮನವಿ

cfi
Share on facebook
Share on twitter
Share on linkedin
Share on whatsapp
Share on telegram
Share on email
Share on print
ಪುತ್ತೂರು(16/10/2020): 2019-20 ರ ಸಾಲಿನ ಪೋಸ್ಟ್ ಮೆಟ್ರಿಕ್, ಪ್ರೀ ಮೆಟ್ರಿಕ್ , ಮೆರಿಟ್ – ಕಮ್ – ಮೀನ್ಸ್ ವಿದ್ಯಾರ್ಥಿ ವೇತನವನ್ನು ಶೀಘ್ರವೇ ಮಂಜೂರು ಮಾಡಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ನಿಯೋಗವು ದೆಹಲಿ ಐ.ಐ.ಟಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿತು.
 ಕಳೆದ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ವೇತನವು ಇನ್ನೂ ಕೂಡ ವಿದ್ಯಾರ್ಥಿಗಳಿಗೆ ಮಂಜೂರಾಗದೆ ವಿದ್ಯಾರ್ಥಿಗಳು ಸಂಕಷ್ಟಕೀಡಾಗಿದ್ದಾರೆ. ಕೋರೋನ ಸಾಂಕ್ರಾಮಿಕ ರೋಗದಿಂದ ತತ್ತರಿಸಿರುವ ಬಡ,ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಈ ಸಲದ ಶಾಲಾ,ಕಾಲೇಜು ಶುಲ್ಕ ಪಾವತಿಸಲು ಸಾಧ್ಯವಾಗದೆ ತಮ್ಮ ಶೈಕ್ಷಣಿಕ ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂತಕ್ಕೀಡಾಗಿದ್ದಾರೆ, ಆದ್ದರಿಂದ ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಶೀಘ್ರ ಮಂಜೂರು ಮಾಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಮನವಿಯನ್ನು ಸ್ವೀಕರಿಸಿದ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿ ಸದಸ್ಯರಾದ ಸವಾದ್ ಕಲ್ಲರ್ಪೆ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿ ಸದಸ್ಯರಾದ ಸವಾದ್ ಕಲ್ಲರ್ಪೆ, ಪುತ್ತೂರು ಜಿಲ್ಲಾ ಕಾರ್ಯದರ್ಶಿ ಅನ್ಸಾರ್ ಬೆಳ್ಳಾರೆ, ಉಪಾಧ್ಯಕ್ಷ ಅಫ್ರೀದ್ ಕೂರ್ನಡ್ಕ, ಸುಳ್ಯ ಅಧ್ಯಕ್ಷ ಅರ್ಫಿದ್ ಅಡ್ಕಾರ್, ಸಂಟ್ಯಾರ್ ಏರಿಯಾ ಅಧ್ಯಕ್ಷ ಇಮ್ರಾನ್ ಕಲ್ಲರ್ಪೆ , ಉಪ್ಪಿನಂಗಡಿ ಏರಿಯಾ ಅಧ್ಯಕ್ಷ ರಿಝ್ವಾನ್, ಸಬೀರ್ ಕಲ್ಲರ್ಪೆ, ಸಂಶೀರ್ ಸವಣೂರು ಉಪಸ್ಥಿತರಿದ್ದರು.
Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು