ಚಳ್ಳಕೆರೆ(05-10-2020): ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದ ವಾಲ್ಮೀಕಿ ಸಮುದಾಯದ ಯುವತಿಯ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಕರ್ನಾಟಕ ಪಿಂಜಾರ/ನದಾಫ/ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷರಾದ ಡಾ.ಅಬ್ದುಲ್ ರಝಾಕ ನದಾಫ ಅವರ ನೇತೃತ್ವದಲ್ಲಿ ಚಳ್ಳಕೆರೆ ನಗರದ ವಾಲ್ಮೀಕಿ ವೃತ್ತದಲ್ಲಿ ಮೇಣದಬತ್ತಿ ಬೆಳಗುವ ಮೂಲಕ ಪ್ರತಿಭಟಿಸಲಾಯಿತು.
ಈ ವೇಳೆ ಮಹಮ್ಮದ್ ಆಲಿ, ರಾಜಾ ಕೊನ್ನೂರ್ ಹಾಗೂ ಹಲವರು ಉಪಸ್ಥಿತರಿದ್ದರು.