ಆರ್ಥಿಕ ಸಂಕಷ್ಟಕ್ಕೆ ಬೇಸತ್ತ ಕುಟುಂಬ : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಚಾಮರಾಜನಗರ : ಲಾಕ್ಡೌನ್ ಸಮಸ್ಯೆಯಿಂದ ಕುಟುಂಬ ಆರ್ಥಿಕವಾಗಿ ತೀರಾ ಸಂಕಷ್ಟಕ್ಕೆ ಎದುರಿಸಲಾಗದೆ ನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಎಚ್. ಮೂಕನಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ಇಂದು ಆತ್ಮಹತ್ಯೆಗೆ ಶರಣಾಗಿಗಿರುವ ಮನಕಲುಕುವ ಘಟನೆ ಜರುಗಿದೆ.

ಒಂದೇ ಕುಟುಂಬದ ಮಹದೇವಪ್ಪ(46), ಇವರ ಪತ್ನಿ, 10 ವರ್ಷದ ಪುತ್ರಿ ಹಾಗೂ 12 ವರ್ಷ ಮತ್ತೊಬ್ಬ ಪುತ್ರಿ ನೇಣಿಗೆ ಶರಣಾಗಿದ್ದಾರೆ. ಕೆಲ ದಿನಗಳಿಂದ ಮಹಾದೇವಪ್ಪ ಅವರಿಗೆ ಕೊರೋನಾ ಪಾಸಿಟಿವ್ ಆಗಿ ಹೋಂ ಐಸೊಲೇಷನ್ ನಲ್ಲಿದ್ದರು. ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಅಲ್ಲದೆ ಕೊರೋನಾ ಪಾಸಿಟಿವ್ ಆದ ಮೇಲೆ ಅಕ್ಕಪಕ್ಕದವರು, ಪರಿಚಿತರು ಈ ಕುಟುಂಬದವರನ್ನು ನೋಡುವ ದೃಷ್ಟಿಕೋನವೇ ಬದಲಾಗಿತ್ತು. ಗುಣವಾದರೂ ಯಾರೂ ಸಹ ಸರಿಯಾಗಿ ಮಾತನಾಡುತ್ತಿರಲಿಲ್ಲ ಎನ್ನಲಾಗಿದೆ.

ಜನರ ಈ ತಿರಸ್ಕಾರದ ಮನೋಭಾವನೆ ಜೊತೆಗೆ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಹಿನ್ನಲೆ ಮಾನಸಿಕವಾಗಿ ಕುಗ್ಗಿಹೋದ ಈ ಕುಟುಂಬ ನೇಣಿಗೆ ಕೊರಳೊಡ್ಡಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇದೀಗ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದು, ಕೊರೋನಾ ಆತಂಕದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು