ಮೈಸೂರು(15-10-2020): ಚಾಮುಂಡಿ ಬೆಟ್ಟದಲ್ಲಿ ಅಸ್ಪೃಶ್ಯತೆ ಆಚರಣೆ ಆಗುತ್ತಿದೆ. ನಮ್ಮನ್ನು ಏಕೆ ಬೆಟ್ಟಕ್ಕೆ ತಡೆದಿದ್ದೀರಿ. ಪೊಲೀಸ್ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್ ಹಾಕುತ್ತೇವೆ ಎಂದು ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಹಿಷ ದಸರಾ ಆಚರಣೆ ವೇಳೆ ಹೇಳಿದ್ದಾರೆ.
ಮಹಿಷ ದಸರಾವನ್ನು ಪೊಲೀಸರ ಬಿಗಿ ಭದ್ರತೆಯಲ್ಲಿ ಮೈಸೂರಿನ ಅಶೋಕಪುರಂನ ಅಂಬೇಡ್ಕರ್ ಪಾರ್ಕ್ ನಲ್ಲಿ ಆಚರಣೆ ಮಾಡಲಾಯಿತು. ಮಹಿಷನ ಭಾವಚಿತ್ರಕ್ಕೆ ಆಚರಣಾ ಸಮಿತಿ ಪದಾಧಿಕಾರಿಗಳು ಪುಷ್ಪಾರ್ಚನೆ, ಮಾಲಾರ್ಪಣೆ ಮಾಡಿದರು.
ಈ ವೇಳೆ ಮಾಜಿ ಮೇಯರ್ ಪುರುಷೋತ್ತಮ್, ಜ್ಞಾನಪ್ರಕಾಶ ಸ್ವಾಮೀಜಿ, ಸಿದ್ದರಾಮು ಹಾಗೂ ಪ್ರೊ.ಮಹೇಶ್ ಚಂದ್ರಗುರು ಸೇರಿದಂತೆ ಹಲವರು ಭಾಗಿಯಾಗಿದ್ದರು.
ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಜಿಲ್ಲಾಡಳಿತ ಅವಕಾಶ ನೀಡದ ಹಿನ್ನೆಲೆಯಲ್ಲಿ ಅಶೋಕಪುರಂನಲ್ಲಿರುವ ಅಂಬೇಡ್ಕರ್ ಉದ್ಯಾನವನದಲ್ಲಿ ಮಹಿಷ ದಸರಾ ಆಚರಣೆ ಮಾಡಲಾಗಿದೆ.