ಕೋಲಾರ(10-10-2020): ಕಾಲುವೆಯಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳು ನೀರು ಪಾಲಾಗಿರುವ ಘಟನೆ ಬಂಗಾರಪೇಟೆ ಪಟ್ಟಣದ ಕುಂಬಾರಪಾಳ್ಯ ರೈಲ್ವೆ ಅಂಡರ್ ಪಾಸ್ ಬಳಿ ಕಾಲುವೆಯಲ್ಲಿ ನಡೆದಿದೆ.
ಸಾದಿಕ್ (12) ಮತ್ತು ಫಯಾಜ್ (7) ಮೋಹಿಕಾ (8) ಮೃತ ಮಕ್ಕಳು. ಇವರು ಕಾಲುವೆಯಲ್ಲಿ ಆಟ ಆಡುವಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.