ಆಂಧ್ರಪ್ರದೇಶ(18-11-2020): ಕಾರಿನಲ್ಲಿ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಕೃಷ್ಣಾ ಜಿಲ್ಲೆಯ ಎ.ಕಂಡೂರು ಬಳಿ ನಡೆದಿದೆ.
ಶ್ರೀನಿವಾಸ್(5) ಮತ್ತು ಯಮುನಾ(4) ಮೃತ ಮಕ್ಕಳು. ಮನೆ ಬಳಿ ಇದ್ದ ಕಾರ್ ನಲ್ಲಿ ಆಟವಾಡುವ ವೇಳೆ ಕಾರಿನ ಬಾಗಿಲು ಲಾಕ್ ಆಗಿದೆ. ಇದರಿಂದಾಗಿ ಮಕ್ಕಳಿಗೆ ಹೊರಬರಲು ಸಾಧ್ಯವಾಗಿಲ್ಲ. ಕಾರಿನ ಒಳಗಡೆ ಆಮ್ಲಜನಕದ ಕೊರತೆ ಉಂಟಾಗಿದೆ ಇದರಿಂದಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಈ ಕುರಿತು ಕಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುಟ್ಟ ಕಂದಮ್ಮಗಳ ದಾರುಣ ಸಾವಿನಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.