ಕೋವಿಡ್ ಸಂಕಷ್ಟ: ಕನ್ನಡ ಚಿತ್ರರಂಗದ 3000 ಕಾರ್ಮಿಕರಿಗೆ ತಲಾ 5000 ರೂ. ಪರಿಹಾರ ಘೋಷಿಸಿದ ನಟ ಯಶ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ಕೋವಿಡ್ ಹಾಗೂ ಲಾಕ್ ಡೌನ್ ನಿಂದ ತತ್ತರಿಸಿದ ಜನತೆಗೆ ಸಿನಿಮಾ ಗಣ್ಯರು ಒಬ್ಬೊಬ್ಬರಾಗಿ ನೆರವಿನ ಹಸ್ತ ಚಾಚುತ್ತಿದ್ದಾರೆ. ಇದೀಗ ಕನ್ನಡದ ನಟ ಯಶ್ ಕನ್ನಡ ಚಿತ್ರರಂಗದ ಕಾರ್ಮಿಕರ ಕುಟುಂಬದ ನೆರವಿಗೆ ಧಾವಿಸಿ ಮಾನವೀಯತೆ ಮೆರೆದಿದ್ದಾರೆ.

ತೆರೆ ಹಿಂದೆ ಅವಿರತವಾಗಿ ದುಡಿದ 3000ಕ್ಕೂ ಅಧಿಕ ಸಿನಿಮಾ ಕಾರ್ಮಿಕರಿಗೆ ತಲಾ 5000 ರೂ. ನಗದು ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸುವುದಾಗಿ ಯಶ್ ಘೋಷಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಯಶ್, ಕಾಣದ ವೈರಸ್​​​ನಿಂದ ಕಳೆದೊಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈ ಕಟ್ಟಿ ಕುಳಿತಿದೆ. ಹೌದು ಇದು ಬರೀ ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ, ಸುಮಾರು 3000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5000 ರೂ.
ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ.

ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ. ಗೋವಿಂದು ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್ ಅವರೊಂದಿಗೆ ಚರ್ಚಿಸಿದ್ದೇನೆ. ನಮ್ಮ ಕಲಾವಿದರು, ತಂತ್ರಜ್ಞರು ಮತ್ತು ಕಾರ್ಮಿಕರ ಅಧಿಕೃತ ಬ್ಯಾಂಕ್ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ ಎಂದು ಯಶ್ ವಿವರಿಸಿದ್ದಾರೆ.

ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲಾ ಕಷ್ಟಗಳಿಗೂ ಪರಿಹಾರ ಎಂಬುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಂತು ಸಹಾಯ ಮಾಡಿದರೆ. ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎಂಬುದು ನನ್ನ ಆಶಯ ಎಂದು ಅವರು ಹೇಳಿಕೊಂಡಿದ್ದಾರೆ.

ಕೋವಿಡ್ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಅನೇಕ ನಟರು ಜನರು ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಸಾಲಿಗೆ ನಟ ಯಶ್ ಕೂಡ 1.5 ಕೋಟಿ ಮೊತ್ತದ ಆರ್ಥಿಕ ನೆರವು ಒದಗಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು