ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಭರವಸೆ ನೀಡಲು ಸಾಧ್ಯವಿಲ್ಲ: ಡಿಸಿಎಂ ಲಕ್ಷ್ಮಣ ಸವದಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಕಲಬುರಗಿ: ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಹೀಗಾಗಿ ಸಾರಿಗೆ ಸಂಸ್ಥೆ ನೌಕರರಿಗೆ ಯಾವುದೇ ಭರವಸೆ ನೀಡಲು ಸಾಧ್ಯವಿಲ್ಲ.
ಸಾರಿಗೆ ಸಂಸ್ಥೆ ನೌಕರರ ಮುಷ್ಕರ ಹಿಂತೆಗೆದುಕೊಳ್ಳಲು ನಾನು ವಿನಂತಿ ಮಾಡಿದ್ದೇನೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರೂ ಆದ ಲಕ್ಷ್ಮಣ ಸವದಿ ಹೇಳಿದ್ದಾರೆ.

ಇಂದು ಕಲ್ಬುರ್ಗಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಾರಿಗೆ ಸಂಸ್ಥೆ ನೌಕರರ ಮುಷ್ಕರ ಹಿಂಪಡೆಯುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಬೆಳಿಗ್ಗೆ ಏಳು ಗಂಟೆಗೆ ನೌಕರರ ಸಂಘದ ಮುಖಂಡರ ಜೊತೆ ಸಭೆ ಕರೆದಿದ್ದೆ. ಆಂತರಿಕವಾಗಿ ಸಭೆ ಮಾಡಿ ನಂತರ ಹೇಳುತ್ತೇವೆ ಎಂದು ಅವರು ಸಭೆಗೆ ಬರಲಿಲ್ಲ. ಈಗ ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ ಇದೆ. ಯಾವುದೇ ಭರವಸೆ ಕೊಡಲು ಈ ಸಂದರ್ಭದಲ್ಲಿ ಆಗುವುದಿಲ್ಲ. ಈ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಅನುಮತಿ ಕೇಳಿದ್ದೇವೆ. ಆಯೋಗ ಅನುಮತಿ ನೀಡಿದರೆ ಚುನಾವಣಾ ನೌಕರರ ಸಂಘದ ಮುಖಂಡರ ಜೊತೆ ಚರ್ಚಿಸುವೆ. ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈ ಬಿಡುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಒಂದು ವೇಳೆ ನೌಕರರು ಮುಷ್ಕರ ಹಾಗೇ ಮುಂದುವರೆಸಿದರೆ ನಾವೇನು ಕ್ರಮ ತೆಗೆದುಕೊಳ್ಳಬೇಕು ಅದು ನಮಗೆ ಗೊತ್ತು ಎಂದು ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು