ಚುನಾವಣೆಯಲ್ಲಿ ಸ್ಪರ್ಧಿಸದೇ ಸಿಎಂ ಆದ ಇತಿಹಾಸವಿದೆ: ಡಿ.ಕೆ.ಶಿವಕುಮಾರ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಚುನಾವಣೆಯಲ್ಲಿ ಸ್ಪರ್ಧಿಸದೇ ಸಿಎಂ ಆದ ಇತಿಹಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ರೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅಚ್ಚರಿ ಹೇಳಿಕೆ ನೀಡಿದ್ದು, ಚುನಾವಣೆಯಲ್ಲಿ ಸ್ಪರ್ಧಿಸದೇ ಸಿಎಂ ಆದ ಇತಿಹಾಸವಿದೆ ಎಂದು ಅವರು ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ಶಾಸಕರಾದವರೇ ಸಿಎಂ ಆಗಬೇಕು ಅಥವಾ ವಿಧಾನಸಭಾ ಚುನಾವಣೆಯಲ್ಲಿ ಗೆದ್ದವರೇ ಸಿಎಂ ಆಗಬೇಕು ಎಂದಿಲ್ಲ. ಯಾರು ಬೇಕಾದರೂ ಸಿಎಂ ಆಗಬಹುದು. ಚುನಾವಣೆಯಲ್ಲಿ ಗೆಲ್ಲದವರೂ ಸಿಎಂ ಆದ ನಿದರ್ಶನಗಳಿವೆ ಎಂದು ಅವರು ಹೇಳಿದ್ದಾರೆ.

ದೇವರಾಜ ಅರಸು ಚುನಾವಣೆಯಲ್ಲಿ ಗೆದ್ದೇ ಇರಲಿಲ್ಲ. ರಾಮಕೃಷ್ಣ ಹೆಗಡೆ ಅವರು ಶಾಸಕರೂ ಆಗಿರಲಿಲ್ಲ, ಆದರೂ ಅವರೆಲ್ಲ ಮುಖ್ಯಮಂತ್ರಿಯಾಗಿರಲಿಲ್ಲವೇ? ಹಾಗಾಗಿ ಸಿಎಂ ಆಗಬೇಕು ಎಂದರೆ ಗೆದ್ದ ಅಭ್ಯರ್ಥಿಗಳೇ ಆಗಬೇಕು ಎಂದೇನೂ ಇಲ್ಲ ಎಂದು ಡಿಕೆಶಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು