ಆಂಧ್ರಪ್ರದೇಶ(24-02-2021): ಆಂಧ್ರದ ಶ್ರೀಕಾಕುಲಂನಲ್ಲಿ ಟಿಡಿಪಿ, ವೈಎಸ್ಆರ್ಸಿಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ 16 ಮಂದಿ ಗಾಯಗೊಂಡಿದ್ದಾರೆ.
ಶ್ರೀಕಾಕುಲಂನ ಮೆಟ್ಟವಲಸ ಗ್ರಾಮದಲ್ಲಿ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ವೈಎಸ್ಆರ್ಸಿಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿರುವ ಬಗ್ಗೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಎಂ.ಅಹ್ಮದ್ ಖಚಿತಪಡಿಸಿದ್ದಾರೆ.ಘಟನೆ ಬಳಿಕ, ನಾವು ಗ್ರಾಮದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ ಎಂದು ಅಹ್ಮದ್ ಹೇಳಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮೆಟ್ಟವಲಾಸ ಗ್ರಾಮದಲ್ಲಿ ಟಿಡಿಪಿ ಬೆಂಬಲಿತ ಅಭ್ಯರ್ಥಿ ಗೆದ್ದಿದ್ದಾರೆ. ಈ ವಿಚಾರವಾಗಿ ಕೆಲವು ವೈಎಸ್ಆರ್ಸಿಪಿ ಕಾರ್ಯಕರ್ತರು ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಪೋಸ್ಟ್ಗಳನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಡಿಪಿ ಕಾರ್ಯಕರ್ತರು ವೈಎಸ್ಆರ್ಸಿಪಿ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆದು ಘರ್ಷಣೆಗೆ ಕಾರಣಗಿದೆ. ಘರ್ಷಣೆಯಲ್ಲಿ 16 ಜನರು ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಗುಂಪುಗಳನ್ನು ಚದುರಿಸಿದ್ದಾರೆ. ಗಾಯಗೊಂಡವರನ್ನು ರಾಜಮ್ ಪಟ್ಟಣದ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.