ಸಿಎಂ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ: ಅರುಣ್ ಸಿಂಗ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಇಲ್ಲ, ಹೈಕಮಾಂಡ್ ಮಟ್ಟದಲ್ಲಿ ಈ ಕುರಿತು ಯಾವುದೇ ಮಾತುಕತೆಯಾಗಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬದಲಾವಣೆ ಕುರಿತು ಕೆಲವು ದಿನಗಳಿಂದ ಭಾರಿ ಚರ್ಚೆ ನಡೆಯುತ್ತಿದೆ. ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಳಗಿಳಿಸಿ ಬೇರೆ ನಾಯಕರನ್ನು ಸಿಎಂ ಮಾಡುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದೆ ಎಂದು ಬಿಜೆಪಿ ಪಾಳಯದಲ್ಲಿ ಚರ್ಚೆ ನಡೆಯುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಉಸ್ತುವಾರಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ, ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರ ಬದಲಾವಣೆ ಎಂದು ಪದೇ ಪದೇ ಕೇಳಿಬರುತ್ತಿರುವ ಮಾತುಗಳು, ಊಹಾಪೋಹಗಳಿಗೆ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೋವಿಡ್-19 ಸಂಕಷ್ಟದ ಸಮಯದಲ್ಲಿ ಸಾಕಷ್ಟು ಉತ್ತಮ ಕೆಲಸ ಮಾಡಿದ್ದಾರೆ, ಕೋವಿಡ್ ಸಮಸ್ಯೆಗಳನ್ನು ಚೆನ್ನಾಗಿ ನಿರ್ವಹಿಸಿಕೊಂಡು ಹೋಗುತ್ತಿದ್ದಾರೆ, ಅವರ ಕೆಲಸದ ಬಗ್ಗೆ ವರಿಷ್ಠರಿಗೆ ಸಮಾಧಾನವಿದೆ, ಹೀಗಾಗಿ ಮುಖ್ಯಮಂತ್ರಿಯ ಬದಲಾವಣೆಯ ಪ್ರಶ್ನೆ ಉದ್ಭವಿಸುವುದಿಲ್ಲ , ಹಾಗೆಯೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡುವುದಿಲ್ಲ, ಇದೆಲ್ಲ ಕೇವಲ ಕಾಲ್ಪನಿಕ ಎಂದಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು