ಬೆಂಗಳೂರು (26-01-2021): ವಿವಾದಾತ್ಮಕ ಕೃಷಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ರೈತರ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದು,ರೈತ ಮುಖಂಡರು ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಮಾದ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, ರೈತ ಮುಖಂಡರು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅವರಿಗೆ ಗೊತ್ತಿಲ್ಲ.ಶಾಂತಿಯುತ ಪ್ರತಿಭಟನೆಗೆ ನಮ್ಮ ಆಭ್ಯಂತರವಿಲ್ಲ . ಅವರು ಬೇಡಿಕೆ ಏನು ಎಂದು ಹೇಳುತ್ತಿಲ್ಲ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲಾ ರೀತಿಯಲ್ಲಿಯೂ ಯೋಜನೆ ಮಾಡಿ ಕಾಯ್ದೆ ಜಾರಿಗೆ ತಂದಿದ್ದಾರೆ. ಆದರೂ ಪ್ರತಿಭಟನೆ ಮಾಡುತ್ತಿರುವುದು ಸರಿಯಲ್ಲ .ಟ್ರ್ಯಾಕ್ಟರ್ ರ್ಯಾಲಿಯಿಂದ ಜನರಿಗೆ ಸಮಸ್ಯೆಯಾಗುತ್ತದೆ. ಹೀಗಾಗಿ ಬೇಡ ಎಂದಿದ್ದೇವೆ. ರೈತರ ಹೋರಾಟ ಶಾಂತಿಯುತವಾಗಿ ನಡೆದರೆ, ನಮ್ಮ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ.