ಸಿಎಂ ಮಮತಾ ಬ್ಯಾನರ್ಜಿಗೆ ಸೋಲು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಕೊಲ್ಕತ್ತಾ: ನಂದಿಗ್ರಾಮ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ, ಬಿಜೆಪಿಯ ಸುವೇಂದ್ರ ಅಧಿಕಾರಿ ವಿರುದ್ಧ ಸೋಲುಂಡಿದ್ದಾರೆ. ನಂದಿಗ್ರಾಮ ಕ್ಷೇತ್ರದ ಚುನಾವಣೆಯು ದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿತ್ತು.

ಮೊದಲು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರು ಗೆದ್ದಿದ್ದಾರೆಂದು ಹೇಳಲಾಗಿತ್ತು. ಮಾಧ್ಯಮಗಳಲ್ಲೂ ಬ್ರೇಕಿಂಗ್ ನ್ಯೂಸುಗಳಾಗಿ ಬಿತ್ತರವಾಗಿತ್ತು. ಆದರೆ ಮಮತಾ ಬ್ಯಾನರ್ಜಿ 1622 ಮತಗಳಿಂದ ಸೋತಿದ್ದಾರೆಂದು ಚುನಾವಣಾ ಅಧಿಕಾರಿಗಳು ಘೋಷಿಸಿದ್ದಾರೆ.

ಚುನಾವಣಾ ಫಲಿತಾಂಶವು ಗೊಂದಲಗಳಿಂದ ಕೂಡಿರುವುದರಿಂದ ವಿಚಾರದಲ್ಲಿ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು