ಮಂಗಳೂರು(5-11-2020): ಇಂದು ರಾತ್ರಿ ಎಂಟು ಗಂಟೆಗೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿ.ಎಂ ಯಡಿಯೂರಪ್ಪ ಆಗಮಿಸಲಿದ್ದಾರೆ.
ನಾಳೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯ ಹಿನ್ನೆಲೆಯಲ್ಲಿ ಈ ಪ್ರಯಾಣವನ್ನು ಕೈಗೊಂಡಿದ್ದಾರೆ. ಇಂದು ರಾತ್ರಿ ನಗರದಲ್ಲೇ ವಾಸ್ತವ್ಯ ಹೂಡಿ, ನಾಳೆ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ರಾಜ್ಯ ಬಿಜೆಪಿಯ ವಿಶೇಷ ಸಭೆ ಉದ್ಘಾಟನೆ ಮಾಡಲಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅಧಿಕಾರ ವಹಿಸಿಕೊಂಡ ನಂತರ ಇದು ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಕಾರ್ಯಕಾರಿ ಸಭೆ ನಡೆಸಲಾಗುತ್ತಿದೆ. ಪಕ್ಷವನ್ನು ಬಲಪಡಿಸಲು ಮತ್ತು ಪಕ್ಷದ ಮುಂದಿನ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದೆಂದು ನಿರೀಕ್ಷಿಸಲಾಗಿದೆ. ಅಭಿವೃದ್ಧಿ ಕಾರ್ಯಗಳ ಕುರಿತು ಮುಂದಿನ ನಿರ್ಧಾರಗಳನ್ನು ಚರ್ಚಿಸಲಾಗುವುದು. ಮುಂಬರುವ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಿಗೆ ಈಗಲೇ ಕಾರ್ಯತಂತ್ರ ರೂಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಪೂಜಾರಿ ಹೇಳಿದ್ದರು