ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕಾಲೇಜುಗಳಿಗೆ ರಜೆ ಘೋಷಣೆ ಎಂಬ ವದಂತಿ ಹಬ್ಬಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಸುತ್ತೋಲೆ ಸೃಷ್ಠಿಸುವುದು ಅಪರಾಧ. ಅದರಲ್ಲೂ ಸರಕಾರದ ಹೆಸರಿನಲ್ಲಿ ಸುತ್ತೋಲೆ ಸೃಷ್ಠಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದು ದೊಡ್ಡ ಅಪರಾಧವಾಗಿದೆ. ಯಾರೂ ವಿದ್ಯಾರ್ಥಿಗಳ ಭವಿಷ್ಯದ ವಿಚಾರದಲ್ಲಿ ಚೆಲ್ಲಾಟವಾಡುವುದು ಸರಿಯಲ್ಲ ಎಂದರು.
ರಜೆ ನೀಡುವ ಬಗ್ಗೆ ಸರಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಯಾರೋ ದುಷ್ಕರ್ಮಿಗಳು ಕೋವಿಡ್ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಯಬಿಟ್ಟಿದ್ದಾರೆ. ಮೊದಲೇ ಕೋವಿಡ್ ಬಗ್ಗೆ ಆತಂಕದಲ್ಲಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರು ಇದರಿಂದಾಗಿ ಗೊಂದಲಕ್ಕೆ ಒಳಗಾಗಿದ್ದರು.