ಕಮಿಷನ್ ದಂಧೆಯಲ್ಲಿ ವಿಜಯೇಂದ್ರ ಹಾಗೂ ಈಶ್ವರಪ್ಪ ನಡುವೆ ಜಗಳವಾಗಿದೆ: ಸಿದ್ದರಾಮಯ್ಯ ಆರೋಪ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೀದರ(ಬಸವಕಲ್ಯಾಣ): ಯಡಿಯೂರಪ್ಪ ಅವರ ಆಡಳಿತದಲ್ಲಿ ಕಮಿಷನ್ ದಂಧೆ ಭರ್ಜರಿಯಾಗಿ ನಡೆಯುತ್ತಿದೆ. ಕಮಿಷನ್ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರೊಂದಿಗೆ ಜಗಳವಾಡಿಕೊಂಡ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈಶ್ವರಪ್ಪ ಅವರ ಗಮನಕ್ಕೆ ತಾರದೆ ಅವರ ಇಲಾಖೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಮಿಷನ್ ಹೊಡೆಯುವ ವಿಷಯದಲ್ಲಿ ವಿಜಯೇಂದ್ರ ಮತ್ತು ಈಶ್ವರಪ್ಪ ನಡುವೆ ಜಗಳವಾಗಿದೆ. ಬಿಜೆಪಿಯವರ ಭ್ರಷ್ಟ ಆಡಳಿತದಲ್ಲಿ ಕಮಿಷನ್ ದಂಧೆ 30-35 ಪರ್ಸೆಂಟ್ ಗಡಿ ದಾಟಿದೆ ಇದು ಭ್ರಷ್ಟ ಸರ್ಕಾರ ಎಂದು ಟೀಕಿಸಿದ್ದಾರೆ.

“ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕ್ರಿಯಾಯೋಜನೆ ಸಿದ್ಧಪಡಿಸಿದ ಸರ್ಕಾರ, ಅಭಿವೃದ್ಧಿ ಕಾಮಗಾರಿಗಳಿಗೆ ಈ ವರೆಗೆ ನಯಾಪೈಸೆ ಖರ್ಚು ಮಾಡಿಲ್ಲ.‌ ಈ ಕುರಿತು ಯಡಿಯೂರಪ್ಪ ಅವರ ಜೊತೆ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ. ಹಣ ಖರ್ಚು ಮಾಡಿದ್ದರೆ ಲೆಕ್ಕ ಹೇಳಲಿ” ಸವಾಲು ಹಾಕಿದ್ದಾರೆ.

“ಯಡಿಯೂರಪ್ಪ ಅವರನ್ನು ಟೀಕಿಸಿದ್ದಕ್ಕಾಗಿ ಕೆಲ ಸಚಿವರು ನನ್ನ ವಿರುದ್ಧ ಹೇಳಿಕೆ ನೀಡಿದ್ದಾರೆ. ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರು ದಿನಬೆಳಗಾದರೆ ಯಡಿಯೂರಪ್ಪ ವಿರುದ್ಧ ಟೀಕೆ ಮಾಡುತ್ತಾರೆ. ಸಚಿವರಿಗೆ ಧೈರ್ಯವಿದ್ದರೆ ಮೊದಲು ಯತ್ನಾಳ್ ಅವರ ಬಾಯಿ ಮುಚ್ಚಿಸಲಿ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು