ಕಾಂಗ್ರೆಸ್‍ ಪಕ್ಷಕ್ಕೆ ಅಂಬೇಡ್ಕರ್ ಅವರ ಶಾಪವಿದೆ : ನಳೀನ್ ಕುಮಾರ್ ಕಟೀಲ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೀದರ್ (ಬಸವಕಲ್ಯಾಣ): ದಲಿತ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಾಕಿಸಿದ ಕಾಂಗ್ರೆಸಿಗರು, ಅದೇ ದಲಿತ ಶಾಸಕನ ಮನೆಗೆ ಬೆಂಕಿ ಹಾಕಿದ ಸಂಪತ್‍ ರಾಜ್‍ ಅವರನ್ನು ಇದುವರೆಗೆ ಉಚ್ಚಾಟನೆ ಮಾಡಿಲ್ಲ. ಕಾಂಗ್ರೆಸ್‍ ಪಕ್ಷಕ್ಕೆ ಅಂಬೇಡ್ಕರ್ ಅವರ ಶಾಪವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು “ಕಾಂಗ್ರೆಸ್ ಪಕ್ಷ ಕೇವಲ ಪರಮೇಶ್ವರ್ ಅವರನ್ನು ಸೋಲಿಸಿದ್ದಲ್ಲ, ಅಂಬೇಡ್ಕರ್ ಅವರಿಗೂ ಅನ್ಯಾಯ ಮಾಡಿದೆ. ಚುನಾವಣೆಯಲ್ಲಿ ಸ್ಪರ್ಧಿಸಿದ ಅಂಬೇಡ್ಕರ್‌ ಅವರನ್ನು ಸೋಲಿಸಿದ ಕಾಂಗ್ರೆಸ್‌ ಅಂಬೇಡ್ಕರ್‌ ಅವರ ಶವ ಸಂಸ್ಕಾರಕ್ಕೂ ಜಾಗ ನೀಡದೆ ಅನ್ಯಾಯ ಮಾಡಿದೆ” ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅವರು ಅಧಿಕಾರದ ಗದ್ದುಗೆಗೆ ಏರಲು ಅಹಿಂದ ಜಪ ಮಾಡಿದರು. ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಕಾಂಗ್ರೆಸ್ ಪಕ್ಷದ ಮುಖಂಡರು ದಲಿತರಿಗೆ ನ್ಯಾಯವನ್ನು ಒದಗಿಸಿಲ್ಲ. ದಲಿತ ಮುಖಂಡರನ್ನು ಅಧಿಕಾರ ಪಡೆಯಲು ಮಾತ್ರ ಕಾಂಗ್ರೆಸ್ ಬಳಸಿಕೊಂಡಿದೆ” ಎಂದು ಕಾಂಗ್ರೆಸ್ ನಾಯಕರನ್ನು ಟೀಕಿಸಿದ್ದಾರೆ.

ಈ ಸಂದರ್ಭದಲ್ಲಿ ಪಶುಸಂಗೋಪನಾ ಸಚಿವರಾದ ಶ್ರೀ ಪ್ರಭು ಚೌಹಾಣ್‌, ಸಂಸದರಾದ ಶ್ರೀ ಭಗವಂತ ಖೂಬಾ, ಶಾಸಕರಾದ ಶ್ರೀ ಅವಿನಾಶ್ ಜಾಧವ್‌, ಶ್ರೀ ಬಸವರಾಜ ಮತ್ತಿಮೂಡ, ಶ್ರೀ ರಾಜಕುಮಾರ ಪಾಟೀಲ್‌, ಪರಿಷತ್‌ ಸದಸ್ಯರಾದ ಶ್ರೀ ಸುನಿಲ್ ಕುಮಾರ್ ವಲ್ಯಾಪುರೆ, ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಉಪಸ್ಥಿತರಿದ್ದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು