ಕಾಂಗ್ರೆಸ್​ ರಾಜ್ಯಸಭಾ ಸದಸ್ಯ ರಾಜೀವ್ ಸತಾವ್ ಕೋವಿಡ್ ಸೋಂಕಿಗೆ ಬಲಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ಕರೊನಾ ವೈರಸ್​ ಸೋಂಕಿನಿಂದ ಬಳಲುತ್ತಿದ್ದ ಕಾಂಗ್ರೆಸ್​ ರಾಜ್ಯಸಭಾ ಸದಸ್ಯ ರಾಜೀವ್ ಸತಾವ್ ಅವರು ಭಾನುವಾರ ಮೃತಪಟ್ಟಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅವರಿಗೆ ರಾಜೀವ್​ ಅವರು ತುಂಬಾ ಆಪ್ತರಾಗಿ ಗುರುತಿಸಿಕೊಂಡಿದ್ದ ಅವರಿಗೆ ಏಪ್ರಿಲ್ 22ರಂದು ಅವರಿಗೆ ಕರೊನಾ ಸೋಂಕು ತಗುಲಿತ್ತು. ಪುಣೆಯ ಜೆಹಾಂಗೀರ್​ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ವೆಂಟಿಲೇಟರ್​ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ.

ಪ್ರಸ್ತುತ ರಾಜ್ಯಸಭೆಯಲ್ಲಿ ಸಂಸತ್ ಸದಸ್ಯರಾಗಿದ್ದರು. ಈ ಹಿಂದೆ ಮಹಾರಾಷ್ಟ್ರದ ಹಿಂಗೋಲಿಯಿಂದ 16ನೇ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿದ್ದರು.
ರಾಜೀವ್​ ಅವರು ಗುಜರಾತ್ ರಾಜ್ಯದ ಎಐಸಿಸಿ ಉಸ್ತುವಾರಿ ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಶಾಶ್ವತವಾಗಿ ಆಯ್ಕೆಯಾಗಿದ್ದರು.

ರಾಜೀವ್ ಸತಾವ್ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು