ಮತಾಂತರ ಕಾಯ್ದೆ: ಸಿಎಂ ಸ್ಪಷ್ಟನೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಹುಬ್ಬಳ್ಳಿ:  ರಾಜ್ಯದಲ್ಲಿ ಆಮಿಷವೊಡ್ಡಿ ಮತಾಂತರ ಮಾಡುವುದಕ್ಕೆ ಅವಕಾಶ ಇಲ್ಲ, ಮತಾಂತರದಿಂದ ಬಡ ಕುಟುಂಬಗಳಿಗೆ ತೊಂದರೆಯಾಗುತ್ತದೆ,  ಹೀಗಾಗ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ರಚಿಸಬೇಕೆಂದು ಬಯಸುತ್ತಿದ್ದಾರೆ. ಈ ಬಗ್ಗೆ ಕಾನೂನು ಇಲಾಖೆ ಜತೆ ಚರ್ಚೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ, ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ.

ಅವರು ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗೋಷ್ಠಿಯನ್ನುಧ್ಧೇಶಿಸಿ ಮಾತನಾಡಿದರು. ಮತಾಂತರ ನಿಷೇಧ ಕಾಯ್ದೆ ಮಂಡನೆ ಕುರಿತು ಮಾತನಾಡಿದ ಅವರು, ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲಾ ಧರ್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ. ಈಗಾಗಲೇ ಕ್ರಿಶ್ಚಿಯನ್ ಸಮುದಾಯ ನಾಯಕರಿಗೆ ಈ ಬಗ್ಗೆ ಮನವರಿಕೆ ಮಾಡಿದ್ದೇವೆ. ಬಡತನವನ್ನು ದುರುಪಯೊಗ ಮಾಡಿಕೊಂಡು ಮತಾಂತರ ಮಾಡೋದು ತಪ್ಪು. ಆಸೆ, ಆಮಿಷ ಒಡ್ಡಿ ಮತಾಂತರ ಆಗೋದಕ್ಕೆ ಅವಕಾಶವಿಲ್ಲ. ಹೀಗಾಗಿ ಮತಾಂತರ ಕಾಯ್ದೆ ಚರ್ಚೆಗೂ ಮೊದಲು ಒಂದು ಕಮಿಟಿ ಮಾಡಿದ್ದೇವೆ. ಆ ವರದಿ ಬಳಿಕ ಬೆಳಗಾವಿಯಲ್ಲಿ ಸಂಪುಟ ಸಭೆ ನಡೆಸಿ ಕಾಯ್ದೆ ಬಗ್ಗೆ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು