ಕ್ರೈಸ್ತ ಧರ್ಮಕ್ಕೆ ಸೇರಿದ್ದ ಒಂದೇ ಕುಟುಂಬದ 9 ಜನರು ಹಿಂದೂ ಧರ್ಮಕ್ಕೆ ‘ಘರ್ ವಾಪಸಿ’

Share on facebook
Share on twitter
Share on linkedin
Share on whatsapp
Share on telegram
Share on email
Share on print

ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ನಿವಾಸಿ , ಕ್ರೈಸ್ತ ಧರ್ಮಕ್ಕೆ ಸೇರಿದ್ದ ಜಯಶೀಲನ್‌ ಕುಟುಂಬದ 9 ಸದಸ್ಯರು ಹಿಂದು ಧರ್ಮಕ್ಕೆ ಘರ್ ವಾಪಸಿಯಾದ ಘಟನೆ ನಡೆದಿದೆ.

ಜನ್ನಾಪುರದ ಶ್ರೀರಾಮ ಭಜನಾ ಮಂದಿರದಲ್ಲಿ ಅರ್ಚಕ ಕೃಷ್ಣಮೂರ್ತಿ ಸೋಮಯಾಜಿ ಹಾಗೂ ಅರಕೆರೆ ವಿರಕ್ತ ಮಠದ ಕರಿಸಿದ್ದೇಶ್ವರ ಸ್ವಾಮೀಜಿ ಸಮ್ಮುಖದಲ್ಲಿ ಹಿಂದು ಧರ್ಮಕ್ಕೆ ಮರಳಿ ಸೇರ್ಪಪಡೆಗೊಂಡರು.

ಮೂಲತಃ ಹಿಂದೂ ಧರ್ಮದವರಾದ ಜಯಶೀಲನ್‌ ಅವರು ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಗೊಂಡಿದ್ದರು. ಇದೀಗ ಸ್ವಪ್ರೇರಣೆಯಿಂದ ಇಡೀ ಕುಟುಂಬ ಮೂಲ ಧರ್ಮಕ್ಕೆ ಮರು ಮತಾಂತರಗೊಂಡಿದ್ದಾರೆ.

ವಿಶ್ವ ಹಿಂದೂ ಪರಿಷತ್‌, ಭಜರಂಗದಳ ನೇತೃತ್ವ ಮತ್ತು ಸಮ್ಮುಖದಲ್ಲಿ ಮತಾಂತರಗೊಂಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು