ಇಂದು ರಾಜ್ಯದಲ್ಲಿ ಆರು ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ದೃಢ

corona
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು 20/10/2020: ರಾಜ್ಯದಲ್ಲಿ ಇಂದು 6,297 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,76,901ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 66 ಮಂದಿ ಕೋರೋನಾ ಸೋಂಕಿಗೆ ಬಲಿಯಾಗಿದ್ದಾರೆ.  ರಾಜ್ಯದಲ್ಲಿ  ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,608ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈ ದಿನ 8500 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 6,62,329ಕ್ಕೆ ಏರಿಕೆಯಾಗಿದೆ. 1,03,945 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 941 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು