ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೋವಿಡ್‌–19; 5,356 ಹೊಸ ಪ್ರಕರಣ

Share on facebook
Share on twitter
Share on linkedin
Share on whatsapp
Share on telegram
Share on email
Share on print

 

ಬೆಂಗಳೂರು(23/10/2020): ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 5,356 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 51 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ‌ ನೀಡಿದೆ.

ಇದೇ ಅವಧಿಯಲ್ಲಿ 8,749 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 89,483 ಸಕ್ರಿಯ ಪ್ರಕರಣಗಳಿವೆ. ಒಟ್ಟು 7,93,907 ಪ್ರಕರಣಗಳು ದಾಖಲಾಗಿದ್ದು, ಈವರೆಗೂ 6,93,584 ಮಂದಿ ಗುಣಮುಖರಾಗಿದ್ದಾರೆ ಹಾಗೂ 10,821 ಮಂದಿ ಮೃತಪಟ್ಟಿದ್ದಾರೆ.

ಐಸಿಯುನಲ್ಲಿ 936 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 2,688 ಪ್ರಕರಣಗಳು ದಾಖಲಾಗಿದ್ದರೆ, 4,335 ಮಂದಿ ಗುಣಮುಖರಾಗಿದ್ದಾರೆ ಹಾಗೂ 21 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು