ಬೆಂಗಳೂರು(25/10/2020): ಇಂದು ರಾಜ್ಯದಲ್ಲಿ 4,439 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಒಟ್ಟು ಸೋಂಕಿತರ ಸಂಖ್ಯೆ 8 ಲಕ್ಷಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 32 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,905ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು 10,106 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 7,10,843ಕ್ಕೆ ಏರಿಕೆಯಾಗಿದೆ. 81,050 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 939 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.