ಕೊರೊನಾ ಆರ್ಭಟ: ಮಹಾರಾಷ್ಟ್ರದಲ್ಲಿ ಇಂದಿನಿಂದ 15 ದಿನ ಜನತಾ ಕರ್ಫ್ಯೂ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಮುಂಬೈ: ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಇಂದು ರಾತ್ರಿಯಿಂದ ‘ಜನತಾ ಕರ್ಫ್ಯೂ’ ಜಾರಿಗೊಳಿಸಲಾಗಿದೆ. ಅಗತ್ಯ ವಸ್ತು ಮತ್ತು ಸೇವೆಯ ಹೊರತಾಗಿ ಉಳಿದ ಎಲ್ಲ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಘೋಷಿಸಿದ್ದಾರೆ.

ಕೊರೊನಾ ಎರಡನೇ ಅಲೆಯಿಂದ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ. ಕೋವಿಡ್ ತಡೆಗಟ್ಟಲು ಇದೊಂದು ಕೊನೆಯ ಮಾರ್ಗವೆಂದು ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಿದೆ. ಮೇ 1 ರವರೆಗೆ ಮಹಾರಾಷ್ಟ್ರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗುವುದು. ಹೊಸದಾಗಿ ಕಠಿಣ ನಿರ್ಬಂಧದ ಮಾರ್ಗಸೂಚಿಯನ್ನು ಮಹಾರಾಷ್ಟ್ರ ಸರ್ಕಾರ ಬಿಡುಗಡೆ ಮಾಡಿದೆ. ಈ ಅವಧಿಯಲ್ಲಿ ಜನರು ಅನಗತ್ಯವಾಗಿ ಮನೆಯಿಂದ ಹೊರಗೆ ಬರುವಂತಿಲ್ಲ, ಅನಗತ್ಯ ಸಂಚಾರಕ್ಕೆ ಬಂದ್ ಹೇರಲಾಗಿದೆ ಎಂದು ತಿಳಿಸಿದೆ.

ರಾಜ್ಯದಲ್ಲಿ ಕಠಿಣ ನಿರ್ಬಂಧಗಳನ್ನು ಹೇರಲಾಗಿದ್ದು, ಸಿನಿಮಾ ಥೀಯೇಟರ್, ಜಿಮ್, ಕ್ರೀಡಾ ಸಂಕೀರ್ಣ, ಸಿನಿಮಾ, ಧಾರಾವಾಹಿ ಚಿತ್ರೀಕರಣ, ಹೋಟೆಲ್, ರೆಸ್ಟೋರೆಂಟ್ ಬಂದ್ ಇರಲಿದ್ದು, ಹೋಮ್ ಡೆಲಿವರಿಗೆ ಅವಕಾಶ ನೀಡಲಾಗಿದೆ. ಅದೇ ರೀತಿ ಬಡವರು, ಕೂಲಿ ಕಾರ್ಮಿಕರಿಗೆ 3 ತಿಂಗಳು ಅಕ್ಕಿ, ಗೋಧಿ, ಎರಡು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು