ಕೊರೊನಾ ಆರ್ಭಟ: ಹರಿಯಾಣ ರಾಜ್ಯದ 10ನೇ ತರಗತಿ ಪರೀಕ್ಷೆ ರದ್ದುಗೊಳಿಸಿದ ಸರ್ಕಾರ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಚಂಡೀಗಢ: ದೇಶದಲ್ಲಿ ಕೊರೊನಾ ವೈರಸ್ ಆರ್ಭಟ ಜೋರಾಗಿದೆ, ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಚಿಂತಾಜನಕ ಸ್ಥಿತಿಯಲ್ಲಿದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿವೆ. ಕೊರೊನಾ ದಿಂದ ತತ್ತರಿಸಿದ ಹರಿಯಾಣ ಸರ್ಕಾರವು 10ನೇ ತರಗತಿಯ ಪರೀಕ್ಷೆಗಳನ್ನು ಗುರುವಾರ ರದ್ದುಗೊಳಿಸುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದೆ.

ಕೋವಿಡ್ ಪ್ರಕರಣಗಳು ಕೋವಿಡ್ ಪ್ರಕರಣ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹಾಗಾಗಿ, ಸಿಬಿಎಸ್‌ಸಿಯ ಕೈಗೊಂಡ ನಿರ್ಧಾರವನ್ನು ಹರಿಯಾಣ ಸರ್ಕಾರವೂ ಅನುಸರಿಸಿದೆ, 12ನೇ ತರಗತಿಯ ಪರೀಕ್ಷೆಗಳು ಮುಂದೂಡಲಾಗಿದೆ ಎಂದು ಹರಿಯಾಣದ ಶಿಕ್ಷಣ ಸಚಿವ ಕನ್ವರ್ ಪಾಲ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ, ಸಿಬಿಎಸ್ ಇ ಪರೀಕ್ಷೆಗಳನ್ನು ಈಗಾಗಲೇ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಹರಿಯಾಣ ರಾಜ್ಯದ ಪ್ರೌಢಶಿಕ್ಷಣ ಮಂಡಳಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು