ಕೊರೊನಾ ಭಯ: ‘ಸೆಲ್ಫ್ ಲಾಕ್ ಡೌನ್’ ಹೇರಿಕೊಂಡ ಬಾವಗಿ ಗ್ರಾಮಸ್ಥರು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೀದರ್ : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿಮೀರಿದೆ, ಅದರಲ್ಲೂ ಗಡಿ ಜಿಲ್ಲೆ ಬೀದರ್ ನಲುಗಿ ಹೋಗಿದೆ. ಇದರಿಂದ ಬೇಸತ್ತ ಗ್ರಾಮಸ್ಥರು ಸೆಲ್ಫ್ ಲಾಕ್ ಡೌನ್ ಮೊರೆ ಹೋಗಿದ್ದಾರೆ.

ಗಡಿ ಬೀದರ್ ಜಿಲ್ಲೆ ಮಹಾರಾಷ್ಟ್ರ ಪಕ್ಕದಲ್ಲಿರುವ ಜಿಲ್ಲೆಗೆ ದಿನನಿತ್ಯ ಮಹಾರಾಷ್ಟ್ರ ನಂಟು ಇದ್ದೆ ಇದೆ. ಈ ನಿಟ್ಟಿನಲ್ಲಿ ಸರ್ಕಾರವು ಸಾಕಷ್ಟು ರೂಲ್ಸ್ ಜಾರಿಗೊಳಿಸುತ್ತಿದೆ. ಬೀದರ್ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಕೂಡ ಜಾರಿಯಲ್ಲಿದೆ. ಆದರೂ ಕೊರೊನಾ ಪ್ರಕರಣಗಳ ಸಂಖ್ಯೆ ಮಾತ್ರ ಇಳಿಕೆ ಇಲ್ಲ, ಪ್ರತಿದಿನ 400ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ಸದ್ಯ ಗ್ರಾಮಸ್ಥರೇ ಇಲ್ಲಿ ಸ್ವಯಂ ಲಾಕ್ ಡೌನ್ ಘೋಷಿಸಿಕೊಳ್ಳುತ್ತಿದ್ದಾರೆ.

ಬೀದರ್ ಜಿಲ್ಲೆಯ ಬಾವಗಿ ಗ್ರಾಮವೊಂದರಲ್ಲಿ ಈಗ ಸ್ವಯಂ ಲಾಕ್ ಡೌನ್ ಗೆ ಸಾಕ್ಷಿಯಾಗಿದೆ.
ಗ್ರಾಮದ ಹಿರಿಯರು, ಜನಪ್ರತಿನಿಧಿಗಳು ಸೇರಿಕೊಂಡು ಕೊರೊನಾ ವೈರಸ್ ಗೆ ಕಡಿವಾಣ ಹಾಕಲು ಈ ನಿರ್ಧಾರ ಕೈಗೊಂಡಿದ್ದಾರೆ. ಗ್ರಾಮದಲ್ಲಿ ತಮಟೆ ಬಾರಿಸುವ ಮುಖಾಂತರ ಗ್ರಾಮಸ್ಥರು ‘ಸೆಲ್ಫ್ ಲಾಕ್ ಡೌನ್’ ಹೇರಿಕೊಂಡಿದ್ದಾರೆ.

ಗ್ರಾಮದಲ್ಲಿ ಕೆಲವರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಈ ರೀತಿ ನಿರ್ಧಾರಕ್ಕೆ ಬಂದಿದ್ದಾರೆ, ಬೆಳಗ್ಗೆ ಹಾಗೂ ಸಂಜೆ 6 ರಿಂದ 8 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಅಂಗಡಿಗಳು ತೆರೆಯಲು ಅನುಮತಿ ನೀಡಲಾಗಿದೆ. ಗ್ರಾಮದಲ್ಲಿ ಪ್ರತಿಯೊಬ್ಬರಿಗೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ, ಕೊವೀಡ್ ನಿಯಮಗಳನ್ನು ತಪ್ಪದೇ ಪಾಲಿಸುವಂತೆ ತಮಟೆ ಬಾರಿಸುವ ಮೂಲಕ ತಿಳಿಸಲಾಗಿದೆ.

ಕೋವಿಡ್ ನಿರ್ವಹಣೆಗೆ ಸರ್ಕಾರ ಎಷ್ಟೇ ಟಫ್ ರೂಲ್ಸ್
ಜಾರಿಗೊಳಿಸಿದರೂ ಜನರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಆದರೆ ಪ್ರಜ್ಞಾವಂತ ನಾಗರಿಕರು ಈ ರೀತಿ ಪ್ರತಿಯೊಂದು ಹಳ್ಳಿ ಹಾಗೂ ನಗರಗಳು ಸ್ವಯಂ ಲಾಕ್ ಡೌನ್ ಹೇರಿಕೊಳ್ಳುವುದರ ಮೂಲಕ ಕೊರೊನಾವನ್ನು ದೇಶದಿಂದ ತೊಲಗಿಸಬಹುದು ಎಂದು ಈ ಗ್ರಾಮಸ್ಥರಿಂದ ಕಲಿಯಬೇಕಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು