ಕೊರೊನಾ ಬಿಕ್ಕಟ್ಟು ಎದುರಿಸುತ್ತಿರುವ ಭಾರತದೊಂದಿಗೆ ನಾವಿದ್ದೇವೆ: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಇಸ್ಲಾಮಾಬಾದ್: ಭಾರತದಲ್ಲಿ ಕೋವಿಡ್ ಎರಡನೇ ಅಲೆಯ ತೀವ್ರತೆಗೆ ಪಾಕಿಸ್ತಾನ ಪ್ರಧಾನಿ ಮಾನವೀಯತೆ ನುಡಿಗಳು ತಿಳಿಸಿದ್ದಾರೆ. ಭಾರತ ಎದುರಿಸುತ್ತಿರುವ ಕೋವಿಡ್‌-19 ಬಿಕ್ಕಟ್ಟಿಗೆ ಸ್ಪಂದಿಸಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು, ‘ಮಾನವೀಯತೆಯು ಎದುರಿಸುತ್ತಿರುವ ಈ ಜಾಗತಿಕ ಸವಾಲಿನ ವಿರುದ್ಧ ನಾವು ಒಟ್ಟಾಗಿ ಹೋರಾಡಬೇಕು’ ಎಂದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಇಮ್ರಾನ್ ಖಾನ್,
‘ಕೋವಿಡ್ -19 ಅಪಾಯಕಾರಿ ಅಲೆಯೊಂದಿಗೆ ಹೋರಾಡುತ್ತಿರುವ ಭಾರತದ ಜನರೊಂದಿಗೆ ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಲು ನಾನು ಬಯಸುತ್ತೇನೆ.
ತ್ವರಿತವಾಗಿ ಚೇತರಿಸಿಕೊಳ್ಳಲು ನಮ್ಮ ಪ್ರಾರ್ಥನೆ ಇದೆ, ನಮ್ಮ ನೆರೆಹೊರೆ ಮತ್ತು ಪ್ರಪಂಚದಲ್ಲಿ ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ಎಲ್ಲರಿಗೂ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇವೆ.

ಮಾನವೀಯತೆಯನ್ನು ಒಟ್ಟಾಗಿ ಎದುರಿಸುತ್ತಿರುವ ಈ ಜಾಗತಿಕ ಸವಾಲನ್ನು ನಾವು ಹೋರಾಡಬೇಕು ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತಿಳಿಸಿದ್ದಾರೆ.

ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದ ನಂತರ ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ಕೂಡ ಈ ಹಿಂದೆ ಭಾರತದ ಜನರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು