ಕರೋನಾ ಇಲ್ಲದಿದ್ದರೆ ಇಷ್ಟು ಹೊತ್ತಿಗಾಗಲೇ ಬಿಜೆಪಿ ಶಾಸಕರು ರೆಸಾರ್ಟ್ ಸೇರಿರುತ್ತಿದ್ದರು : ರಾಜ್ಯ ಕಾಂಗ್ರೆಸ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯ ರಾಜಕಾರಣದಲ್ಲ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಚಾರ ಬಿರುಗಾಳಿಯಂತೆ ಸೂಸುತ್ತಿದೆ. ಕೆಲವು ನಾಯಕರು ದೆಹಲಿಗೆ ದೌಡಾಯಿಸಿದೆ ತಡ ಮುಖ್ಯಮಂತ್ರಿ ಬದಲಾವಣೆ ಕಾವು ಮತ್ತೆ ಮುನ್ನೆಲೆಗೆ ಬಂದಿದೆ.

ಆದರೆ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಮುಂದಿನ ಸಿಎಂ ಯಾರು? ಎನ್ನುವ ಪ್ರಶ್ನೆಗಳು ಸಹಜವಾಗಿ ಗೋಚರಿಸುತ್ತವೆ. ಸಿಎಂ ಯಡಿಯೂರಪ್ಪ ಅವರ ಮೇಲೆ ಹೈಕಮಾಂಡ್ ಮುನಿಸಿಕೊಂಡು ನಾಯಕತ್ವ ಬದಲಾವಣೆಗೆ ಒಲವು ತೋರುತ್ತಿದೆಯೇ? ಎಂದು ಹೇಳಲು ಖಚಿತ ಆಧಾರಗಳಿಲ್ಲ. ಆದರೂ ರಾಜ್ಯ ಬಿಜೆಪಿ ಪಡಸಾಲೆಯಲ್ಲಿ ಮತ್ತೆ ಬಿಜೆಪಿ ನಾಯಕರ ತಿಕ್ಕಾಟ ಇರುವುದು ಮತ್ತೊಮ್ಮೆ ಸಾಬೀತಾಗಿದೆ. ಇದರಿಂದ ಬಿಎಸ್ ವೈ ಮುಕ್ತ ಬಿಜೆಪಿ ಮಾಡಲು ಹೊರಟಿರುವ ನಾಯಕರಿಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ.

ಈ ಕುರಿತು ಅಧಿಕೃತ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ ಕಾಂಗ್ರೆಸ್ , “ಕರೋನಾ ಇಲ್ಲದೆ ಇದ್ದರೆ ಇಷ್ಟು ಹೊತ್ತಿಗಾಗಲೇ ಬಿಜೆಪಿ ಶಾಸಕರು ರೆಸಾರ್ಟ್ ಸೇರಿರುತ್ತಿದ್ದರು! ಇಷ್ಟು ದಿನ ಕರೋನಾ ನಿರ್ವಹಣೆಗೆ ಹೊರಬರದೆ ಅಡಗಿದ್ದ ಬಿಜೆಪಿ ಸಚಿವ ಶಾಸಕರೆಲ್ಲ ಈಗ ಕುರ್ಚಿ ಕದನಕ್ಕಾಗಿ ದಿಡೀರ್ ಪ್ರತ್ಯಕ್ಷರಾಗಿದ್ದಾರೆ.
ತನಗೆ ಸಿಕ್ಕ ಅಧಿಕಾರವಧಿಯಲ್ಲೆಲ್ಲ ಕುರ್ಚಿ ಕಾಳಗದಲ್ಲಿ ಮುಳುಗುವ ಬಿಜೆಪಿಯಿಂದ ಜನರ ರಕ್ಷಣೆ ಸಾಧ್ಯವಿಲ್ಲ” ರಾಜ್ಯ ಕಾಂಗ್ರೆಸ್ ರಾಜ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ಆದರೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಎಲ್ಲಿಯೂ ಚರ್ಚೆ ಆ ಬಗ್ಗೆ ಆಗಿಲ್ಲ, ಯಾವುದೇ ಬದಲಾವಣೆ ಕೂಡ ಮಾಡಲ್ಲ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆದಗಿನಿಂದ ಬದಲಾವಣೆ ಬಗ್ಗೆ ಚರ್ಚೆ ಆರಂಭವಾಗಿದೆ. ಆದರೆ ಯಡಿಯೂರಪ್ಪ ಅವರೇ ನಮ್ಮ ನಾಯಕರು. ಮುಂದಿನ ಎರಡು ವರ್ಷ ಅವರೇ ಸಿಎಂ ಆಗಿ ಇರುತ್ತಾರೆ. ಅವರೇ ಅಧಿಕಾರವನ್ನು ಕೂಡ ಪೂರ್ಣಗೊಳಿಸ್ತಾರೆ‌ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ತಿಳಿಸಿದ್ದಾರೆ.

ಸದ್ಯಕ್ಕೆ ಶಾಸಕಾಂಗ ಪಕ್ಷದ ಸಭೆ ಇಲ್ಲ, ಕೋವಿಡ್ ಮುಗಿಯುವ ತನಕ ಯಾವುದೇ ಸಭೆಗಳನ್ನು ನಡೆಸಲ್ಲ ಎನ್ನುವ ಮೂಲಕ ನಳೀನ್ ಕುಮಾರ್ ಬಿಎಸ್​ವೈ ಪರ ಬ್ಯಾಟ್​ ಬೀಸಿದ್ದಾರೆ. ಕೋವಿಡ್ ಕಾಲದ ಇಂಥ ದುರಿತ ಕಾಲದಲ್ಲಿ ರಾಜ್ಯ ರಾಜಕೀಯ ನಾಯಕರ ಹಳೆ ವರಸೆಯನ್ನು ಕಂಡು ರಾಜ್ಯದ ಜನತೆಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು