ಕೊರೊನಾ ಲಸಿಕೆ ನೀಡುವಿಕೆಯಲ್ಲಿ ಕರ್ನಾಟಕ ದೇಶದಲ್ಲೇ ಪ್ರಥಮ ಸ್ಥಾನಿಯಾಗಿದೆ: ರಾಜ್ಯ ಬಿಜೆಪಿ ಟ್ವೀಟ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಮಧ್ಯೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ರಾಜ್ಯ ಬಿಜೆಪಿ ಅಭಿಪ್ರಾಯಪಟ್ಟಿದ್ದೆ.

ಕೊರೋನಾ ಸೋಂಕಿತರಿಗಾಗಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 1.23 ಲಕ್ಷ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಎಪ್ರಿಲ್ 17 ರ ದಿನದಂತ್ಯಕ್ಕೆ ರಾಜ್ಯದಲ್ಲಿ ಒಟ್ಟು 71,91,885 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ಎಪ್ರಿಲ್ 17 ರಂದು ಲಸಿಕೆ ನೀಡುವಿಕೆಯಲ್ಲಿ ಕರ್ನಾಟಕ ದೇಶದಲ್ಲೇ ಪ್ರಥಮ ಸ್ಥಾನಿಯಾಗಿದ್ದು 2,59,439 ಜನರಿಗೆ ಲಸಿಕೆ ನೀಡಲಾಗಿದೆ. ಸುಳ್ಳು ಮಾಹಿತಿಗಳಿಗೆ ಬಲಿಯಾಗದಿರೋಣ, ಕೊರೋನ ಹಿಮ್ಮೆಟ್ಟಿಸೋಣ ಎಂದು ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಪರೋಕ್ಷವಾಗಿ ಬಿಜೆಪಿ ಟಾಂಗ್ ಕೊಟ್ಟಿದೆ.

ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರಪ್ರದೇಶ ನಂತರದ ಸ್ಥಾನದಲ್ಲಿದೆ. ರಾಜ್ಯ ಸರ್ಕಾರ ಕೋವಿಡ್ ವಿರುದ್ಧ ಸಮರ್ಥವಾಗಿ ಹೋರಾಡುತ್ತಿದೆ.

ರಾಜ್ಯದಲ್ಲಿರುವ ಆಕ್ಸಿಜನ್ ಸಿಲಿಂಡರ್ ತಯಾರಿಕಾ ಘಟಕ -7 , ಉತ್ಪಾದನಾ ಸಾಮರ್ಥ್ಯ (ದಿನವೊಂದಕ್ಕೆ)- 812 ಟನ್, ಎಪ್ರಿಲ್ 17 ರಂದು ಬಳಕೆಯಾದ ಆಕ್ಸಿಜನ್ ಸಿಲಿಂಡರ್ – 272.61 ಟನ್ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆಯೊಂದಿಗೆ ರಾಜ್ಯ ಸರ್ಕಾರ ಕೊರೊನಾ ನಿರ್ವಹಣೆಗೆ ಸಿದ್ಧವಾಗಿದೆ. ಕೊರೊನಾ ವಿರುದ್ಧ ಹೋರಾಡಲು ಜನತೆ ಸಹಕರಿಸಿ, ವಿಪಕ್ಷಗಳ ಸುಳ್ಳು ಮಾಹಿತಿಗಳಿಗೆ ಬಲಿಯಾಗದಿರಿ ಎಂದು ರಾಜ್ಯ ಬಿಜೆಪಿ ಟ್ವೀಟ್ ನಲ್ಲಿ ಮಾಹಿತಿ ನೀಡಿ ಮನವಿ ಮಾಡಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು