ಕೊರೊನಾ ಸೋಂಕಿತರ ಪ್ರಾಣ ರಕ್ಷಣೆಯಲ್ಲಿ ಬಿಜೆಪಿ ಸರ್ಕಾರ ವಿಫಲ: ರಾಜ್ಯ ಕಾಂಗ್ರೆಸ್ ಧರಣಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ದಿನೇದಿನೇ ಹೆಚ್ಚುತ್ತಿದೆ, ಕೊರೋನಾ ಸೋಂಕಿತರ ಪ್ರಾಣ ರಕ್ಷಣೆಯಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬೆಡ್, ಆಕ್ಸಿಜನ್, ವೆಂಟಿಲೇಟರ್ ಒದಗಿಸುವಲ್ಲಿ ನಿರ್ಲಕ್ಷ ವಹಿಸಿರುವ, ಬಡವರಿಗಾಗಿ ವಿಶೇಷ್ ಪ್ಯಾಕೇಜ್ ಘೋಷಿಸದ ಕೇಂದ್ರ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಜೊತೆಗೂಡಿ ವಿಕಾಸಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಬಿತ್ತಿ ಪತ್ರಗಳನ್ನು ತೋರಿಸಿ ಘೋಷಣೆ ಕೂಗಿದರು, ದೈಹಿಕ ಅಂತರ ಕಾಪಾಡಿಕೊಂಡು ನಡೆಸಿದ ಕಾಂಗ್ರೆಸ್ ನಾಯಕರು ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಅಘೋಷಿತ ಲಾಕ್ ಡೌನ್ ಹೇರಿ ಬಡಜನತೆಗೆ ಸಂಕಷ್ಟಕ್ಕೆ ದೂಡಿದೆ, ಆರ್ಥಿಕ ನೆರವು ಘೋಷಣೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಸಲೀಂ ಅಹಮದ್, ಮಾಜಿ ಸಚಿವರಾದ ಕೆ‌.ಜೆ ಜಾರ್ಜ್, ರಮೇಶ್ ಕುಮಾರ್, ಕೃಷ್ಣೆ ಭೈರೆಗೌಡ್, ಮಾಜಿ ಸಂಸದ ಉಗ್ರಪ್ಪ, ಬಿ.ಕೆ. ಹರಿಪ್ರಸಾದ್ ಮತ್ತಿತರರು ಈ ಧರಣಿಯಲ್ಲಿ ಪಾಲ್ಗೊಂಡಿದ್ದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು