ಕೊರೊನಾ ಸೋಂಕು ಹೆಚ್ಚಳ : NEET ಪರೀಕ್ಷೆ ದಿನಾಂಕ ಮುಂದೂಡಿಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, NEET ಪರೀಕ್ಷೆಯನ್ನು ಮುಂದೂಡಿದೆ. ಏಪ್ರಿಲ್ 18 ನೀಟ್ ಪರೀಕ್ಷೆಗಳು ನಡೆಯಬೇಕಿತ್ತು. ಆದ್ರೆ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ದಿನಗಳಲ್ಲಿ ಪರೀಕ್ಷಾ ದಿನಾಂಕವನ್ನು ನಿರ್ಧರಿಸಲಾಗುವುದು ಎಂದು ಕೇಂದ್ರ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಏಪ್ರಿಲ್ 18ರಂದು ನಡೆಯಬೇಕಿದ್ದ NEETPG2021 ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ನೀಟ್ ಪರೀಕ್ಷಾ ದಿನಾಂಕವನ್ನು ಮುಂಬರುವ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ. ಯುವ ಮೆಡಿಕಲ್ ಸ್ಟೂಡೆಂಟ್ಸ್​ಗಳನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಡಾ.ಹರ್ಷವರ್ಧನ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು