ಕೊರೊನಾ ಸೋಂಕು ಏರಿಕೆ : ಬೆಂಗಳೂರು ನಗರದಲ್ಲಿ 6 -9 ತರಗತಿ ಸ್ಥಗಿತ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ. ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕು ಭಾರಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 6 ರಿಂದ 9 ನೇ ವರೆಗಿನ ತರಗತಿಗಳ ಸ್ಥಗಿತಗೊಳಿಸುವಂತೆ ಶಿಕ್ಷಣ ಸಚಿವ ಸುರೇಶಕುಮಾರ್ ಸೂಚನೆ ನೀಡಿದ್ದಾರೆ.

ಕೋವಿಡ್ ಏರಿಕೆಯ ಹಿನ್ನೆಲೆಯಲ್ಲಿ 6 ರಿಂದ 9 ನೇಯ ತರಗತಿಯ ಭೌತಿಕ ತರಗತಿಗಳನ್ನು ಮುಂದಿನ ಆದೇಶದವರೆಗೆ ಸರ್ಕಾರ ಸ್ಥಗಿತಗೊಳಿಸಿದೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ 6 ರಿಂದ 9ನೇ ತರಗತಿ ಗಳನ್ನು ಬಂದ್ ಮಾಡಲಾಗಿದೆ. 10 ನೇ ತರಗತಿಗಳು ಎಂದಿನಂತೆ ಮುಂದುವರೆಯಲಿವೆ. ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಗೆ ಮಾತ್ರ ಈ ತೀರ್ಮಾನ ಅನ್ವಯವಾಗುತ್ತದೆ. ಉಳಿದ ಜಿಲ್ಲೆಗಳಲ್ಲಿ ಬಂದ್ ಇಲ್ಲ, ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. 6 – 9 ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆಗಳ ನಡೆಸುವ ಕುರಿತು ಮುಂದಿನ ದಿನಗಳಲ್ಲಿ ಅಗತ್ಯ ನಿರ್ದೇಶನ ನೀಡಲಾಗುತ್ತದೆ. ಪೋಷಕರಿಗೆ ಯಾವುದೇ ರೀತಿಯ ಆತಂಕ ಪಡಬಾರದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು