ಕೊರೊನಾ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ 135 ಕೋಟಿ ನೆರವು : ಗೂಗಲ್ ಸಿಇಒ ಸುಂದರ್ ಪಿಚೈ ಘೋಷಣೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ಭಾರತದಲ್ಲಿ ಉಲ್ಬಣಗೊಳ್ಳುತ್ತಿರುವ ಕೋವಿಡ್ ಬಿಕ್ಕಟ್ಟನ್ನು ನೋಡಿ ಹೃದಯ ಭಾರವಾಗಿದೆ. ಇಂಥ ಸಂದಿಗ್ಧ ಪರಿಸ್ಥಿತಿ ಕಂಡು ಮನಸ್ಸು ಧ್ವಂಸವಾಯಿತು. ನಮ್ಮ ಗೂಗಲ್ ಮತ್ತು ಗೂಗ್ಲರ್‌ ವತಿಯಿಂದ  #GiveIndia ಮತ್ತು #UNICEF ಗೆ ವೈದ್ಯಕೀಯ ಸರಬರಾಜುಗಾಗಿ 135 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಗೂಗಲ್ ಸಿಇಒ ಸುಂದರ್ ಪಿಚೈ ಘೋಷಿಸಿದ್ದಾರೆ.

ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಅವರು ಕೋವಿಡ್ -19 ರ ಎರಡನೇ ತರಂಗದ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ಬೆಂಬಲವನ್ನು ವಾಗ್ದಾನ ಮಾಡಿದ್ದಾರೆ.
ಈ ನಿಟ್ಟಿನಲ್ಲಿ ವೈದ್ಯಕೀಯ ಸರಬರಾಜುಗಾಗಿ, ಹೆಚ್ಚಿನ ಅಪಾಯದ ಸಮುದಾಯಗಳಿಗೆ ಹೆಚ್ಚಿನ ಸಹಾಯ ಹಸ್ತವನ್ನು ನೀಡುವ ನಿಟ್ಟಿನಲ್ಲಿ ಭಾರತಕ್ಕೆ 135 ಕೋಟಿ ಹಣವನ್ನು ನೀಡುವುದಾಗಿ ಹೇಳಿದ್ದಾರೆ.

ಕೊರೊನಾ ಎರಡನೇ ಅಲೆ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ವಿವಿಧ ದೇಶಗಳು ನೆರವಿನ ಹಸ್ತ ಚಾಚುತ್ತಿವೆ. ದೇಶದಲ್ಲಿ ಪ್ರತಿದಿನ 3 ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆ ಯಾಗಿ, 2 ಕ್ಕಿಂತಲೂ ಹೆಚ್ಚು ಜನರು ಸಾವನ್ನಪ್ಪುತ್ತಿದ್ದಾರೆ. ಇಂಥ ಬಿಕ್ಕಟ್ಟು ಎದುರಿಸುತ್ತಿರುವ ಭಾರತಕ್ಕೆ ನೆರವು ಒದಗಿಸುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು