ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ 50 ಸಾವಿರ ನೆರವು : ಕೃಷಿ ಸಚಿವ ಬಿ.ಸಿ.ಪಾಟೀಲ್ ಘೋಷಣೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಹಾವೇರಿ : ಕೊವೀಡ್ ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 50 ಸಾವಿರ ರೂ. ವೈಯಕ್ತಿಕ ಪರಿಹಾರ ಧನ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಘೋಷಿಸಿದ್ದಾರೆ.

ಹಿರೇಕೆರೂರು ಮತಕ್ಷೇತ್ರದ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50 ಸಾವಿರ ರೂ. ಪರಿಹಾರ ಧನ ನೀಡುವುದಾಗಿ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಿರೇಕೆರೂರು ಮತ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಸುಮಾರು 18 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ ಭೇಟಿಯಾಗಿ ಇಂದಿನಿಂದ ಪರಿಹಾರ ಧನ ವಿತರಿಸುತ್ತೇನೆ ಎಂದು ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಕೊರೊನಾ ಎರಡನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿದೆ ಹಾಗೂ ಮೂರನೇ ಅಲೆಯನ್ನು ಎದುರಿಸಲು ನಾವು ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಕಡ್ಡಾಯ ಮಾಸ್ಕ್ ಧರಿಸುವುದು, ವೈಯಕ್ತಿಕ ಅಂತರ ಕಾಪಾಡಬೇಕು. ಹಾಗೂ ಸರ್ಕಾರದ ಜೊತೆಗೆ ಕೈಜೋಡಿಸಿ ಕೋವಿಡ್ ತಡೆಗಟ್ಟಲು ಸಹಕಾರ ನೀಡಬೇಕು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮನವಿ ಮಾಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು