ನವದೆಹಲಿ(12-11-2020): ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ತೀರ್ಪು ಪ್ರಕಟಿಸಿದ ಮಾಜಿ ವಿಶೇಷ ನ್ಯಾಯಾಧೀಶ ಎಸ್ ಕೆ ಯಾದವ್ ಅವರ ಭದ್ರತೆಯನ್ನು ವಿಸ್ತರಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಎಸ್ ಕೆ ಯಾದವ್ ಬಿಜೆಪಿ ನಾಯಕರಾದ ಎಲ್ ಕೆ ಅಡ್ವಾಣಿ, ಎಂ ಎಂ ಜೋಶಿ ಮತ್ತು ಉಮಾ ಭಾರತಿ ಸೇರಿದಂತೆ ಎಲ್ಲಾ 32 ಆರೋಪಿಗಳನ್ನು ಇತ್ತೀಚೆಗೆ ಖುಲಾಸೆಗೊಳಿಸಿದ್ದರು.
ನ್ಯಾಯಮೂರ್ತಿ ಆರ್ ಎಫ್ ನಾರಿಮನ್ ನೇತೃತ್ವದ ನ್ಯಾಯಪೀಠ ಮತ್ತು ನ್ಯಾಯಮೂರ್ತಿಗಳಾದ ನವೀನ್ ಸಿನ್ಹಾ ಮತ್ತು ಕೃಷ್ಣ, ಪತ್ರವನ್ನು ಅವಲೋಕಿಸಿದ ನಂತರ, ಭದ್ರತೆಯನ್ನು ಒದಗಿಸುವುದು ಸೂಕ್ತವೆಂದು ನಾವು ಪರಿಗಣಿಸುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಸೆಪ್ಟೆಂಬರ್ 30 ರಂದು, ವಿಶೇಷ ನ್ಯಾಯಾಲಯವು ಈ ಪ್ರಕರಣದ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ. ವಿಡಿಯೋ ಸೇರಿದಂತೆ ಹಲವು ಸಾಕ್ಷ್ಯಾಗಲೂ ಇದ್ದರೂ ಅಡ್ವಾನಿ ಸೇರಿದಂತೆ ಇತರ ಆರೋಪಿಗಳು ದೋಷಿಗಳಲ್ಲ ಎಂದು ತೀರ್ಪು ನೀಡಿದ್ದರು.