ಒಂದೇ ಶಾಲೆಯ ನಾಲ್ಕು ಮಕ್ಕಳಿಗೆ ಕೋವಿಡ್ ಧೃಢ

Share on facebook
Share on twitter
Share on linkedin
Share on whatsapp
Share on telegram
Share on email
Share on print

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಬಳಿಯಿರುವ ಜವಾಹರ್ ನವೋದಯ ವಿದ್ಯಾಲಯ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾಹಿತಿ ನೀಡಿದ್ದಾರೆ. ಈವರೆಗೆ ಜಿಲ್ಲೆಯ 4,882 ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ಈ ಪೈಕಿ 3,667 ವಿದ್ಯಾರ್ಥಿಗಳಿಗೆ ನೆಗೆಟಿವ್ ವರದಿ ಬಂದಿದೆ. ಉಳಿದ 1,215 ವರದಿಗಳು ಬರಬೇಕಾಗಿದೆ.

ಈಗಾಗಲೇ ಪಾಸಿಟಿವ್ ಬಂದ ನಾಲ್ವರು ವಿದ್ಯಾರ್ಥಿಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದ ವಿದ್ಯಾರ್ಥಿಗಳ ಹಾಗೂ ಸಿಬ್ಬಂದಿಯ ವರದಿ ಇಂದು ಸಂಜೆಯೊಳಗೆ ಲಭ್ಯವಾಗಲಿದೆ. ಸದ್ಯ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು