ಕೋವಿಡ್ 2ನೇ ಅಲೆಗೆ ಪ್ರಧಾನ ಮಂತ್ರಿಯ ನಾಟಕಗಳೇ ಕಾರಣ: ರಾಹುಲ್ ಗಾಂಧಿ ಟೀಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ದೇಶದಲ್ಲಿ ಕಾಣಿಸಿಕೊಂಡಿರುವ ಕೋವಿಡ್‌ ಎರಡನೇ ಅಲೆಗೆ ಪ್ರಧಾನಮಂತ್ರಿಯ ಗಿಮಿಕ್‌ಗಳೇ ಕಾರಣ. ಅವರಿಗೆ ಕೋವಿಡ್‌ ಸೋಂಕು ಅರ್ಥವಾಗಲೇ ಇಲ್ಲ. ಭಾರತದಲ್ಲಿನ ಸಾವಿನ ಪ್ರಮಾಣ ಸುಳ್ಳು ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಟೀಕಿಸಿದ್ದಾರೆ.

ಇಂದು ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾಧ್ಯಮಗಳನ್ನು ಉದ್ದೇಶಿ ಶಮಾತನಾಡುತ್ತಿದ್ದ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಭಾರತದಲ್ಲಿ ಕಾಣಿಸಿಕೊಂಡಿರುವ ಕೊರೊನಾ ವೈರಸ್‌ನ ಹೊಸ ತಳಿ ಮತ್ತು ಅದರ ವಿರುದ್ಧದ ಹೋರಾಟದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗೊತ್ತೇ ಇಲ್ಲ. ಲಸಿಕೆ ಹಂಚುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಯಾವುದೇ ಯೋಜನೆಗಳಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ಯಾವುದೇ ಲಸಿಕಾ ಯೋಜನೆಗಳನ್ನು ಹೊಂದಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ದೇಶದಲ್ಲಿ ಇದೇ ವೇಗದಲ್ಲಿ ಕೋವಿಡ್ ಲಸಿಕಾ ಅಭಿಯಾನ ಮುಂದುವರಿದರೆ ಮೂರನೇ ಅಲೆಯ ಆತಂಕ ಹೆಚ್ಚಾಗುತ್ತದೆ ಎಂದು ರಾಹುಲ್ ಎಚ್ಚರಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು