ಕೋವಿಡ್ ಬಗ್ಗೆ ಜಾಥಾ ಉದ್ಘಾಟಿಸಿ ಮಹತ್ವದ ಅಭಿಪ್ರಾಯ ಹಂಚಿಕೊಂಡ ನ್ಯಾಯಾಧೀಶೆ ಶಾಹಿದಾ

covid camphin
Share on facebook
Share on twitter
Share on linkedin
Share on whatsapp
Share on telegram
Share on email
Share on print

ಹಲಗೂರು (30-10- 2020): ದೇಶದಲ್ಲಿ ಹಾಗೂ ರಾಜ್ಯದಲ್ಲಿ ಹೆಚ್ಚು ಕರೋನ ವೈರಸ್ ಬಗ್ಗೆ ಸಾರ್ವಜನಿಕರು ಭಯಪಡುವ ಅಗತ್ಯ ಇಲ್ಲ ಮುಂಜಾಗ್ರತೆ ಕ್ರಮವಾಗಿ ಎಚ್ಚರಿಕೆಯಿಂದ ಇರಬೇಕು ಪ್ರತಿಯೊಬ್ಬರಲ್ಲೂ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು.ಸ್ಯಾನಿಟೈಸರ ಉಪಯೋಗಿಸಿ ಕಡ್ಡಾಯವಾಗಿ ಮಾಸ್ಕ್ ಧರಿಸಿದರೆ ಇಂತಹ ರೋಗದಿಂದ ದೂರ ಇರಲು ಸಾಧ್ಯವಾಗುತ್ತದೆ ಎಂದು ಮಳವಳ್ಳಿ ನ್ಯಾಯಾಲಯದ ನ್ಯಾಯಾಧೀಶರಾದ k. ಶಾಹಿದಾ ತಿಳಿಸಿದರು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಸಮಿತಿ ಬೆಂಗಳೂರು, ಮಂಡ್ಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಳವಳ್ಳಿ ತಾಲೂಕು ಕಾನೂನು ಸೇವೆಗಳ ಸಮಿತಿ ವಕೀಲರ ಸಂಘ ಮತ್ತು ಆರೋಗ್ಯ ಇಲಾಖೆ ಇವರುಗಳ ಸಹಯೋಗದೊಂದಿಗೆ ಕೋವಿಡ್ 19 ತಡೆಗಟ್ಟುವಿಕೆಯ ಜನಾಂದೋಲನ ಜಾಥಾ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ ಮಾತನಾಡುತ್ತ,  ಜನರಲ್ಲಿ ಮಹಾಮಾರಿ ಕರೋನ ವೈರಸ್ ಬಗ್ಗೆ ಭಯ ಇದೆ ಭಯಪಡುವ ಅಗತ್ಯವಿಲ್ಲ ಅವರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದರ ಜೊತೆಗೆ ಆಗಿಂದಾಗೆ ಕೈಗಳನ್ನು ತೊಳೆದುಕೊಳ್ಳಬೇಕು ಪ್ರತಿಯೊಬ್ಬರು ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ ಹಾಕಿದರೆ ಯಾವುದೇ ವೈರಸ್ ನಿಮ್ಮ ಹತ್ತಿರ ಬರುವುದಿಲ್ಲ ಆದುದರಿಂದ ಇದರ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಿದ್ದ ಕೋವಿಡ್ 19 ಪರೀಕ್ಷೆಯನ್ನು ಪ್ರತಿ ಗ್ರಾಮದಲ್ಲೂ ಸಹ ಮಾಡಲಾಗುತ್ತಿದೆ ಇದರ ಸದುಪಯೋಗವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಂಡು ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಕರೆ ನೀಡಿದರು.

ನಂತರ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಾರ್ವಜನಿಕರಿಗೆ ಕೋವಿಡ್ 19 ಬಗ್ಗೆ ಹೇಗೆ ದೂರ ಇರಬೇಕು ಎಂಬುದರ ಬಗ್ಗೆ ಅರಿವು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಹಲಗೂರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪುರುಷೋತ್ತಮ್ ಮತ್ತು ಸಿಬ್ಬಂದಿ ಆಶಾ ಕಾರ್ಯಕರ್ತರು ಆರೋಗ್ಯ ಸಹಾಯಕ ಶಿಕ್ಷಣ ಇಲಾಖೆಯ ವೀರಣ್ಣಗೌಡ ಸೇರಿದಂತೆ ಇತರರು ಇದ್ದರು.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು