ಕೋವಿಡ್ ಹೆಚ್ಚಳ : ಇಂದಿನಿಂದ ಆಂಧ್ರಪ್ರದೇಶದ 1ರಿಂದ 9ನೇ ತರಗತಿ ಶಾಲೆಗಳು ಬಂದ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಅಮರಾವತಿ: ದೇಶದಲ್ಲಿ ಕೊರೊನಾ ವೈರಸ್ ಅಬ್ಬರಕ್ಕೆ ದೇಶದ ಜನ ತತ್ತರಿಸಿ ಹೋಗಿದ್ದಾರೆ. ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ, ದೆಹಲಿ, ಹರಿಯಾಣ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆಗಳು ಬಂದ್ ಆಗಿವೆ. ಈಗ ಆಂಧ್ರಪ್ರದೇಶ ರಾಜ್ಯಕ್ಕೂ ತಟ್ಟಿದ ಕೋವಿಡ್ ಎಫೆಕ್ಟ್, ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ರಾಜ್ಯಾದ್ಯಂತ ಇಂದಿನಿಂದ 1 ರಿಂದ 9 ನೇ ತರಗತಿವರೆಗಿನ ಎಲ್ಲಾ ಶಾಲೆಗಳನ್ನು ಮುಚ್ಚಲು ಆಂಧ್ರಪ್ರದೇಶ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ ಆದೇಶಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನೇದಿನೇ ಹೆಚ್ಚಳವಾಗುತ್ತಿದ್ದು, ಇದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ಈ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ರಾಜ್ಯದ 1ರಿಂದ 9 ತರಗತಿ ಶಾಲೆಗಳು ಬಂದ್ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ‌.

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಏಪ್ರಿಲ್ 20 ರಿಂದ ರಾಜ್ಯದಾದ್ಯಂತ ಹಾಸ್ಟೆಲ್ ಗಳು ಮತ್ತು ಕೋಚಿಂಗ್ ಕೇಂದ್ರಗಳು ಸೇರಿದಂತೆ 1 ರಿಂದ 9 ನೇ ತರಗತಿಗಳ ವರೆಗಿನ ಎಲ್ಲಾ ಶಾಲೆಗಳನ್ನು ಮುಚ್ಚಲು ಸೋಮವಾರ ಆದೇಶಿಸಿದ್ದಾರೆ. 10 ಹಾಗೂ 12 ತರಗತಿಗಳ ಕುರಿತು ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ.

ಕೋವಿಡ್-19 ಮಾರ್ಗಸೂಚಿ ಅನುಸರಿಸಿ 10 ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ. ರಾಜ್ಯದ ಕೋವಿಡ್ ಪರಿಸ್ಥಿತಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ, ,ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಬೇಕು ಮತ್ತು ನಿಯಮಗಳನ್ನು ಉಲ್ಲಂಘಿಸುವ ಎಲ್ಲರಿಗೂ 100 ದಂಡ ವಿಧಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು‌.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು