ಕೋವಿಡ್ ಹೆಚ್ಚಳ : ಪಶ್ಚಿಮ ಬಂಗಾಳದ ಎಲ್ಲಾ ರ್ಯಾಲಿಗಳು ರದ್ದುಗೊಳಿಸಿದ ರಾಹುಲ್ ಗಾಂಧಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ದಾಖಲೆ ಮಟ್ಟಿಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಶ್ಚಿಮಬಂಗಾಳದಲ್ಲಿ ನಡೆಯಬೇಕಾದ ಚುನಾವಣೆ ರ್ಯಾಲಿಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದಾರೆ. ಅಷ್ಟೇ ಅಲ್ಲದೇ ದೊಡ್ಡ ಸಾರ್ವಜನಿಕ ರ್ಯಾಲಿ, ಸಭೆ, ಸಮಾರಂಭಗಳನ್ನು ನಡೆಸುವ ಪರಿಣಾಮಗಳ ಬಗ್ಗೆ ಎಲ್ಲ ರಾಜಕಾರಣಿಗಳು ಯೋಚಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೋವಿಡ್ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ನಾನು ಪಶ್ಚಿಮಬಂಗಾಳದಲ್ಲಿ ಎಲ್ಲಾ ಸಾರ್ವಜನಿಕ ಸಮಾರಂಭಗಳನ್ನು ರದ್ದುಗೊಳಿಸಿದ್ದೇನೆ. ರಾಜಕೀಯ ನಾಯಕರು ಇಂತಹ ಸಂದರ್ಭದಲ್ಲಿ ದೊಡ್ಡ ರ್ಯಾಲಿಗಳನ್ನು ನಡೆಸುವ ಪರಿಣಾಮಗಳ ಬಗ್ಗೆ ಯೋಚಿಸಬೇಕು ಎಂದು ಎಲ್ಲ ರಾಜಕೀಯ ಮುಖಂಡರಿಗೆ ಸಲಹೆ ನೀಡುತ್ತೇನೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಹಾಗೂ ಅಮಿತ್ ಷಾ ಸೇರಿದಂತೆ. ಹಲವು ನಾಯಕರು ಕೋವಿಡ್ ಲೆಕ್ಕಿಸದೆ ದೊಡ್ಡ ರ್ಯಾಲಿ ಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇಂಥ ಸಮಾವೇಶಗಳಿಂದ ದೊಡ್ಡ ಅನಾಹುತ ಆಗಬಹುದು, ರಾಜಕೀಯ ನಾಯಕರು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರದ ನಾಯಕರಿಗೆ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು