ಮುಂಬೈ(22-02-2020): ಎರಡನೇ ಅಲೆಯ ಕೋವಿಡ್ ಹಿನ್ನೆಲೆಯಲ್ಲಿ ಭಾರತದ ಹೆಚ್ಚಿನ ನಗರಗಳಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿದೆ. ಈ ಮಧ್ಯೆ ಅಮರಾವತಿಯಲ್ಲಿ ಒಂದು ಸಂಪೂರ್ಣ ಲಾಕ್ ಡೌನ್ ಹೇರಲಾಗಿದೆ.
ಮಹಾರಾಷ್ಟ್ರದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಅಮರಾವತಿಯಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಹೇರಲಾಗಿದೆ. ಇಂದು ಸಂಜೆಯಿಂದಲೇ ಲಾಕ್ಡೌನ್ ನಿಯಮ ಜಾರಿಗೆ ಬರಲಿದೆ.
ಸಚಿವೆ ಯಶೋಮತಿ ಠಾಕೂರ್ ಲಾಕ್ ಡೌನ್ ಕುರಿತು ಮಾಹಿತಿಯನ್ನು ನೀಡಿದ್ದು, ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಮಾತನಾಡಿ, ಕೋವಿಡ್ ನಿಯಮಗಳನ್ನು ಸಾರ್ವಜನಿಕರು ಪಾಲಿಸದಿದ್ದಲ್ಲಿ ಮತ್ತೆ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ.