ಕೋವಿಡ್ ಮಾರ್ಗಸೂಚಿ’ ಎಲ್ಲರಿಗೂ ಅನ್ವಯವಾಗದಿದ್ದರೆ ರಾಜಕೀಯ ಹೋರಾಟ ಮಾಡುತ್ತೇವೆ : ಕೆಪಿಸಿಸಿ ಅಧ್ಯಕ್ಷ ಡಿಕೆಶಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನ ನಿಯಂತ್ರಿಸಲು, ಸಾರ್ವಜನಿಕರ ಹಿತಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಏನಾದರೂ ಮಾರ್ಗಸೂಚಿ ಮಾಡಲಿ. ಅದು ಬಿಜೆಪಿ ಸರ್ಕಾರ, ಪಕ್ಷದವರಿಗೂ ಅನ್ವಯವಾಗಬೇಕು, ನಮಗೂ ಆಗಬೇಕು, ಎಲ್ಲರಿಗೂ ಆಗಬೇಕು. ಮಾರ್ಗಸೂಚಿಯನ್ನು ಬಿಜೆಪಿ ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.

ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿ ಟಫ್ ರೂಲ್ಸ್ ಜಾರಿಗೊಳಿಸಿದೆ. ಇದಕ್ಕೆ ಪ್ರತಿಕ್ರಿಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸರ್ಕಾರದ ಮಾರ್ಗಸೂಚಿ ಎಲ್ಲರಿಗೂ ಅನ್ವಯವಾಗಬೇಕು, ಅವರಿಗೆ ಬೇಕಾದವರಿಗೆ ಅನುಕೂಲವಾಗುವ ರೀತಿಯಲ್ಲಿ ಮಾರ್ಗಸೂಚಿ ಮಾಡುವುದು ಬೇಡ. ಇದು ಪ್ರಜಾಪ್ರಭುತ್ವದ ಹಕ್ಕನ್ನು ಮೊಟಕುಗೊಳಿಸುವ ಪ್ರಯತ್ನವಾಗಿದೆ. ಜನರ ಸುರಕ್ಷತೆ ಹಾಗೂ ಒಳ್ಳೆಯದಕ್ಕಾಗಿ ಕಾನೂನು ಮಾಡಲಿ, ನಾವು ಬೇಡ ಎನ್ನುವುದಿಲ್ಲ. ಆ ಕಾನೂನನ್ನು ಎಲ್ಲರೂ ಪಾಲಿಸಬೇಕು. ಅವರಿಗೆ ಬೇಕಾದಾಗ ಕಾನೂನು ಸಡಿಲ ಮಾಡುವುದು ಬೇಕಾದಾಗ ಕಠಿಣ ಮಾಡುವುದು ಸರಿಯಲ್ಲ. ಆ ರೀತಿ ಮಾರ್ಗಸೂಚಿ ಜಾರಿಗೆ ತಂದರೆ ನಾವು ನಮ್ಮದೇ ಆದ ರಾಜಕೀಯ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು