ಕೋವಿಡ್ ನಿಯಮ ಉಲ್ಲಂಘಿಸಿದವರಿಗೆ ಭಾರಿ ದಂಡ : ಟಫ್ ರೂಲ್ಸ್ ಜಾರಿಗೊಳಿಸಿದ ರಾಜ್ಯ ಸರ್ಕಾರ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ಟಫ್ ರೂಲ್ಸ್ ಜಾರಿಗೊಳಿಸಿದೆ. ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳ ಸಮರ್ಪಕ ಅನುಷ್ಠಾನಗೊಳಿಸುವ ಬಗ್ಗೆ ಸರ್ಕಾರ ನಿರ್ಧರಿಸಿದೆ.

ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪಾಲಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿಕೊಂಡಿದ್ದರೂ ಕ್ಯಾರೇ ಎನ್ನದ ಜನರು ಬೇಕಾಬಿಟ್ಟಿಯಾಗಿ ಓಡಾಡುತ್ತಿರುವುದು ಕಂಡುಬರುತ್ತಿದೆ. ಸಭೆ ಸಮಾರಂಭಗಳಲ್ಲಿ ಗುಂಪು ಗುಂಪಾಗಿ ಸೇರುವ ಮೂಲಕ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದವರಿಗೆ ಸರ್ಕಾರ ಮತ್ತೆ ದಂಡ ವಿಧಿಸುವ ನಿಯಮ ಜಾರಿಗೊಳಿಸಿದೆ.

ಮಾಸ್ಕ್ ಧರಿಸದಿದ್ದರೆ ಬಿಬಿಎಂಪಿ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ₹250 ಹಾಗೂ ಇತರೆ ಪ್ರದೇಶಗಳಲ್ಲಿ ₹100 ದಂಡ ಹಾಕುವುದು.
ಸಭೆ-ಸಮಾರಂಭಗಳಲ್ಲಿ, ಅಂಗಡಿ ಮುಂಗಟ್ಟುಗಳಲ್ಲಿ, ಮಾಲ್, ಹೋಟೆಲುಗಳಲ್ಲಿ ನಿಯಮಿತ ಜನಸಂದಣಿ, ಸಾಮಾಜಿಕ ಅಂತರ ನಿಯಮಗಳು ಉಲ್ಲಂಘನೆಯಾದಲ್ಲಿ ಹವಾ ನಿಯಂತ್ರಿತವಲ್ಲದ ಸಭಾಂಗಣ/ಸ್ಥಳಗಳ ಮಾಲೀಕರಿಗೆ ₹5,000 ಮತ್ತು ಹವಾನಿಯಂತ್ರಿತ ಸಭಾಂಗಣ, ಸ್ಟಾರ್ ಹೋಟೆಲ್ ಹಾಗೂ ಸಾರ್ವಜನಿಕ ಸಭೆಗಳ ಆಯೋಜಕರಿಗೆ ₹10,000 ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಈಗಾಗಲೇ ಹೊಸ ಆದೇಶ ಹೊರಡಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು