ಕೋವಿಡ್ ನಿಯಂತ್ರಣಕ್ಕೆ ಸುರಕ್ಷತಾ ಮಾರ್ಗಸೂಚಿ ಪಾಲಿಸಿ: ಸಿಎಂ ಯಡಿಯೂರಪ್ಪ ಮನವಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆ ಮತ್ತೆ ತೀವ್ರವಾಗುತ್ತಿದೆ.
ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದಕ್ಕೆ ನಾಗರಿಕರ ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಜನತೆಗೆ ವಿನಂತಿ ಮಾಡಿದ್ದಾರೆ.

ಮಾಸ್ಕ್ ಧಾರಣೆ, ಸ್ವಚ್ಛತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ನಮ್ಮ ಜೀವನ ಕ್ರಮವಾಗಲಿ. ಈ ಮುನ್ನೆಚ್ಚರಿಕೆಯ ಕ್ರಮಗಳ ನಿರ್ಲಕ್ಷ್ಯ ಸರ್ವಥಾ ಸಲ್ಲದು. ಹಿರಿಯ ನಾಗರಿಕರು, ಇತರೆ ಆರೋಗ್ಯ ಸಮಸ್ಯೆಯುಳ್ಳ 45 ರಿಂದ 60 ವರ್ಷದೊಳಗಿನ ವ್ಯಕ್ತಿಗಳು ತಪ್ಪದೇ ಲಸಿಕೆ ಪಡೆದುಕೊಂಡು ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ ಸುರಕ್ಷತೆಯ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ ಎಂದು ಹೇಳಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಈ ಕ್ರಮಗಳನ್ನು ತಪ್ಪದೇ ಪಾಲಿಸುವ ಮೂಲಕ ನಮ್ಮ ಜವಾಬ್ದಾರಿಯನ್ನು ನಿರ್ವಹಿಸೋಣ, ಕೋವಿಡ್ -19 ನಿಯಂತ್ರಿಸೋಣ.
ಜೀವನ – ಜೀವನೋಪಾಯಗಳ ಸಮತೋಲನ ಕಾಪಾಡುವ ಹೊಣೆಗಾರಿಕೆಯನ್ನು ಯಶಸ್ವಿಯಾಗಿ ನಿರ್ವಹಿಸೋಣ, ಮುನ್ನೆಚ್ಚರಿಕೆಯೊಂದಿಗೆ ಮುನ್ನಡೆಯೋಣ ಎಂದು ಯಡಿಯೂರಪ್ಪ ನಾಗರಿಕರಿಗೆ ಮನವಿ ಮಾಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು