ಕೋವಿಡ್‌ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಎಡವಿದೆ : ಮಾಜಿ ಸಿಎಂ ಕುಮಾರಸ್ವಾಮಿ ಟೀಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೋವಿಡ್‌ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವುದಾಗಿಯೂ, ಈ ಬಗ್ಗೆ ವಿಪಕ್ಷಗಳೊಂದಿಗೆ ಸಭೆ ನಡೆಸುವುದಾಗಿಯೂ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಕೋವಿಡ್‌ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ, ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯಿಂದ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ಈ ಮಧ್ಯೆ ರೆಮ್‌ಡಿಸಿವಿರ್‌ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ, ನಕಲಿ ಔಷಧ ಪೂರೈಕೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಒಂದೆಡೆ ಔಷಧದ ದಾಸ್ತಾನು ಮಾಡದೇ ವಿಫಲವಾಗಿರುವ ಸರ್ಕಾರ, ಕಾಳ ಸಂತೆ, ನಕಲಿ ಹಾವಳಿ ನಿಯಂತ್ರಿಸದೇ ಅದಕ್ಷತೆ ಮೆರೆದಿದೆ. ಇಲ್ಲಿ ಕೇಂದ್ರ, ರಾಜ್ಯ ಎಂಬ ಮಾತಿಲ್ಲ. ಎರಡೂ ಸರ್ಕಾರಗಳೂ ಕೋವಿಡ್‌ ವಿಷಯದಲ್ಲಿ ಎಡವಿವೆ’ ಎಂದು ಹೇಳಿದ್ದಾರೆ.

ಕೋವಿಡ್‌ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ. ಸರ್ಕಾರಗಳು ಕನಿಷ್ಠ, ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನಾದರೂ ದಾಸ್ತಾನು ಮಾಡಿಕೊಳ್ಳಬೇಕು. ಅದಿಲ್ಲದೇ, ಸಭೆಗಳನ್ನು ನಡೆಸಿ ಪ್ರಯೋಜನವಿಲ್ಲ ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು