ದ.ಕ.ಜಿಲ್ಲೆ: 298 ಮಂದಿಗೆ ಕೋವಿಡ್ ಪಾಸಿಟಿವ್, ಓರ್ವ ಬಲಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಮಂಗಳೂರು: ದ.ಕ. ಜಿಲ್ಲೆಯಲ್ಲಿ ರವಿವಾರ 298 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದಾರೆ. 24 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇ.2.89 ದಾಖಲಾಗಿದೆ.

ಜಿಲ್ಲೆಯಲ್ಲಿ ಈವರೆಗೆ 1,17,641 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,14,669 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,705 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಸದ್ಯ 1,267 ಸಕ್ರಿಯ ಪ್ರಕರಣವಿದೆ.

ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 92,348 ಪ್ರಕರಣ ದಾಖಲಿಸಿ, 1,11,61,030 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು