ಕೋವಿಡ್ ಪರಿಸ್ಥಿತಿ ಕೈಮೀರಿದ ಮೇಲೆ ನಮ್ಮನ್ನು ಕೇಳುತ್ತಿದ್ದಾರೆ: ಸರ್ಕಾರದ ವಿರುದ್ಧ ಡಿಕೆಶಿ ಗರಂ

Share on facebook
Share on twitter
Share on linkedin
Share on whatsapp
Share on telegram
Share on email
Share on print

ರಾಯಚೂರು: ರಾಜ್ಯ ಬಿಜೆಪಿ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ನಾವು ಕೊಟ್ಟ ಯಾವುದೇ ಸಲಹೆ ಸ್ವೀಕರಿಸಿಲ್ಲ. ಪರಿಸ್ಥಿತಿ ಕೈಮೀರಿದ ಮೇಲೆ ನಮ್ಮನ್ನು ಕೇಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಂಪೂರ್ಣವಿಫಲವಾಗಿವೆ ಎಂದು ಡಿಕೆಶಿ ಹೇಳಿದರು.

ಜನರಿಗೆ ಸುಳ್ಳು ಭರವಸೆಗಳನ್ನು ಕೊಡುತ್ತಿದ್ದಾರೆ, ಜನ ಜೀವ ಮತ್ತು ಜೀವನ ಹೇಗೆ ನಿರ್ವಹಿಸಬೇಕೆಂದು ಯೋಚಿಸುತ್ತಿದ್ದಾರೆ. ಆದರೆ ಸರ್ಕಾರ ಯಾವುದೇ ಆರ್ಥಿಕ ನೆರವು ನೀಡಲಿಲ್ಲ. ಉದ್ಯೋಗದಾತರು, ಉದ್ಯೋಗಿಗಳು ಸೇರಿ ರಾಜ್ಯದ ಜನರು ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಲಾಕ್‌ಡೌನ್‌ನ ಅವಶ್ಯಕತೆ ಇಲ್ಲ, ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲಿ ಎಂದು ಅವರು ಹೇಳಿದರು.

ಈ ಹಿಂದೆ ಜನತೆಗೆ ಮಾತು ಕೊಟ್ಟಿದ ಹಾಗೆ ನಡೆದುಕೊಳ್ಳುತ್ತಿಲ್ಲ. ಹೊಟೇಲ್ ಉದ್ಯಮಿಗಳು ಹೊಟೇಲ್ ಗಳನ್ನು ಮಾರಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಇದೇ 18 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಸಭೆಯ ನಂತರ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಡಿಕೆಶಿ ಹೇಳಿದರು.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು