ಕೋವಿಡ್ ತಡೆಗಟ್ಟಲು ಲಸಿಕೆಯೊಂದೇ ಶಾಶ್ವತ ಪರಿಹಾರ : ಎಂ.ಬಿ.ಪಾಟೀಲ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ವಿಜಯಪುರ: ಕೊರೊನಾ ಮೊದಲನೇ ಅಲೆ ಮುಗಿದು, ಸದ್ಯ ಎರಡನೆಯ ಅಲೆಯ ಹಾನಿಯನ್ನು ಅನುಭವಿಸುತ್ತಿರುವ ನಮ್ಮ ದೇಶಕ್ಕೆ ಮುಂದೆ 3ನೇ ಅಲೆಯ ಆತಂಕವೂ ಇದೆ. ಈ ಕಾರಣದಿಂದ ದೇಶದಲ್ಲಿ ಲಕ್ಷಾಂತರ ಜನರನ್ನು ಕಳೆದುಕೊಂಡಿದ್ದು, ಇದರಿಂದ ಸಾವಿರಾರು ಕುಟುಂಬಗಳು ಬೀದಿಗೆ ಬಂದಿವೆ. ದೇಶದ ಆರ್ಥಿಕ ಸ್ಥಿತಿ ಗಂಭೀರವಾಗಿದೆ ಎಂದು ಶಾಸಕ ಎಂ.ಬಿ.ಪಾಟೀಲ್ ಕಳವಳ ವ್ಯಕ್ತಪಡಿಸಿದರು.

ಕೊರೊನಾ ಸಾಂಕ್ರಾಮಿಕ ರೋಗದಿಂದ ದೇಶದಲ್ಲಿ ಉಂಟಾದ ಈ ಗಂಭೀರ ಸ್ಥಿತಿಯನ್ನು ತಡೆಗಟ್ಟಲು ದೇಶದ 100 ಕೋಟಿ ಜನರಿಗೆ ಕೋವಿಡ್ ಲಸಿಕೆ ಮಾಡುವುದೊಂದೇ ಶಾಶ್ವತ ಪರಿಹಾರ. ಕೇಂದ್ರ ಹಾಗೂ ರಾಜ್ಯ ಸರ್ಕಾರ 100 ಕೋಟಿ ಜನರಿಗೆ ವ್ಯಾಕ್ಸಿನೇಷನ್ ಮಾಡಿಸುವ ಅಭಿಯಾನವನ್ನು ಕೈಗೊಂಡು, ಅದಕ್ಕೆ ಎಲ್ಲ ಅಗತ್ಯ ನೆರವು ಒದಗಿಸಿ, ವಿಶೇಷ ಆದ್ಯತೆಯನ್ನು ನೀಡಬೇಕಾದ ತುರ್ತು ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈಗಾಗಲೇ ವ್ಯಾಕ್ಸಿನೇಷನ್ ಮುಗಿಸಿರುವ ಅಮೇರಿಕಾ, ಯೂರೋಪಿಯನ್ ರಾಷ್ಟ್ರಗಳು, ಇಸ್ರೆಲ್ ಮತ್ತಿತರ ದೇಶಗಳು ಈ ಮಹಾಮಾರಿಯಿಂದ ಮುಕ್ತವಾಗಿ ಅಲ್ಲಿನ ಜನ-ಜೀವನ ಮುಂಚಿನಂತೆ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ. ಆ ಮಾದರಿಯಲ್ಲಿ ಭಾರತದಲ್ಲಿಯೂ 130 ಕೋಟಿ ಜನರಲ್ಲಿ ಕನಿಷ್ಠ 100 ಕೋಟಿ ಜನರನ್ನು ಗುರಿಯಾಗಿಸಿ, ಈ ಲಸಿಕೆ ಹಾಕಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ನಮ್ಮ ದೇಶದಲ್ಲಿಯೇ ಹೆಚ್ಚಿನ ಲಸಿಕೆ ಉತ್ಪಾದನೆ ಮಾಡಬೇಕು. ಅಗತ್ಯವಿರುವಷ್ಟು ಬೇರೆ ರಾಷ್ಟ್ರಗಳಿಂದ ಕೂಡ ಲಸಿಕೆ ಆಮದು ಮಾಡಿಕೊಂಡು, ಒಟ್ಟಾರೆ 100 ಕೋಟಿ ಜನರಿಗೆ ಲಸಿಕೆ ಹಾಕುವ ಗುರಿ ಹೊಂದಿ ನಮ್ಮ ಸರ್ಕಾರಗಳು ಕಾರ್ಯಪ್ರವೃತ್ತರಾಗಬೇಕು ಎಂದು ಎಂ.ಬಿ.ಪಾಟೀಲ್ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು