ರಾಜ್ಯದಲ್ಲಿ ಜನವರಿಯಲ್ಲೇ ಕೋವಿಡ್ ಮೂರನೇ ಅಲೆಯ ಸಂಭಾವ್ಯತೆಯ ಎಚ್ಚರಿಕೆ ನೀಡಿದ ತಜ್ಞರು

Share on facebook
Share on twitter
Share on linkedin
Share on whatsapp
Share on telegram
Share on email
Share on print

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನವರಿ ತಿಂಗಳಲ್ಲೇ ರಾಜ್ಯದಲ್ಲಿ ಕೊರೊನಾ 3 ನೇ ಅಲೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 810 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯಾದ್ಯಂತ ಪ್ರಕರಣಳ ಸಂಖ್ಯೆ ಏರಿಕೆಯಾಗುತ್ತಿದೆ.

ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಸತಿ ಶಾಲೆ, ಹಾಸ್ಟೆಲ್, ಅಪಾರ್ಟ್ ಮೆಂಟ್, ಮಾಲ್ ಮತ್ತು ಜನಸಂದಣಿ ಇರುವ ಇತರ ಸ್ಥಳಗಳಲ್ಲಿ ಕೊವಿಡ್ ನಿಯಮ ಪಾಲಿಸಬೇಕು. ಸೌಮ್ಯ ರೋಗದ ಲಕ್ಷಣಗಳನ್ನ ಹೊಂದಿದ್ದರೆ ಮಾತ್ರ ಹೋಂ ಐಸೋಲೇಷನ್ ಆಯ್ಕೆ ಮಾಡಬೇಕು, ಕೊವಿಡ್ ಪರೀಕ್ಷೆ ಹೆಚ್ಚಿಸಬೇಕು. ಕ್ಲಸ್ಟರ್ ಗಳಿಂದ ಶೇ.30 ಎಲ್ಲ ಮಾದರಿಗಳನ್ನ ಕಡ್ಡಾಯವಾಗಿ ಜಿನೋಮಿಕ್ ಸೀಕ್ವೆನ್ಸಿಂಗ್ಗೆ ಕಳುಹಿಸಬೇಕು ಎಂದು ತಜ್ಞರು ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು