ಕೋವಿಡದಿಂದ ಗುಣಮುಖರಾದ ಮುಖ್ಯಮಂತ್ರಿ ಬಿ.ಎಸ್.ವೈ : ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೋವಿಡ್ ಸೋಂಕಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಮುಖ್ಯಮಂತ್ರಿ ಅವರಿಗೆ ಎಪ್ರಿಲ್ 16 ರಂದು ಕೋವಿಡ್ ದೃಢಪಟ್ಟಿತ್ತು, ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಸಿಎಂ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಖ್ಯಮಂತ್ರಿಗಳು ಆಸ್ಪತ್ರೆಯಿಂದ ತೆರಳುವ ಮುನ್ನ ಆಸ್ಪತ್ರೆಯ ವೈದ್ಯರು,ಸಿಬ್ಬಂದಿ ಹೂ ಗುಚ್ಛ ನೀಡಿ ಶುಭ ಹಾರೈಸಿದರು.

ದೇಶದಲ್ಲಿ ಕೋವಿಡ್ ಎರಡನೇ ಅಲೆ ಅಬ್ಬರದ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಿಸಲು ಮಾಸ್ಕ್ ಧಾರಣೆ,ಭೌತಿಕ ಅಂತರ, ಶುಚಿತ್ವ ಪಾಲನೆ ತಪ್ಪದೇ ಮಾಡಿ, ಅನಗತ್ಯವಾಗಿ ಹೊರಗೆ ಬರದೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಮುಖ್ಯಮಂತ್ರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು